ಪ್ರಧಾನ ಮಂತ್ರಿ ಮುದ್ರಾ ಯೋಜನೆಯಡಿ ಸಾಲಮಿತಿ 20 ಲಕ್ಷ ರೂ.ಗಳಿಗೆ ಹೆಚ್ಚಳ

Update: 2024-10-25 15:36 GMT

PC : Pradhan Mantri Mudra Yojana

ಹೊಸದಿಲ್ಲಿ : ಕೇಂದ್ರ ಸರಕಾರವು ದೇಶದಲ್ಲಿ ಉದ್ಯಮಶೀಲತೆಯನ್ನು ಉತ್ತೇಜಿಸಲು ಪ್ರಧಾನ ಮಂತ್ರಿ ಮುದ್ರಾ ಯೋಜನೆ(ಪಿಎಂಎಂವೈ)ಯಡಿ ಸಾಲಮಿತಿಯನ್ನು 20 ಲಕ್ಷ ರೂ.ಗಳಿಗೆ ದ್ವಿಗುಣಗೊಳಿಸಿದೆ.

ಈ ಹೆಚ್ಚಳವು ಹಣವಿಲ್ಲದವರಿಗೆ ಆರ್ಥಿಕ ನೆರವನ್ನು ಒದಗಿಸುವ ಮುದ್ರಾ ಯೋಜನೆಯ ಒಟ್ಟಾರೆ ಉದ್ದೇಶವನ್ನು ಬೆಂಬಲಿಸುವ ಆಶಯವನ್ನು ಹೊಂದಿದೆ ಎಂದು ವಿತ್ತ ಸಚಿವಾಲಯವು ಹೇಳಿಕೆಯಲ್ಲಿ ತಿಳಿಸಿದೆ.

ಈ ಸಂಬಂಧ ಗುರುವಾರ ಅಧಿಸೂಚನೆಯನ್ನು ಹೊರಡಿಸಲಾಗಿದೆ.

ಪಿಎಂಎಂವೈ ಅಡಿ ಸಾಲಮಿತಿಯನ್ನು ಹಾಲಿ 10 ಲಕ್ಷ ರೂ.ಗಳಿಂದ 20 ಲಕ್ಷ ರೂ.ಗಳಿಗೆ ಹೆಚ್ಚಿಸುವುದಾಗಿ ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಅವರು 2024-25ರ ಬಜೆಟ್ ಭಾಷಣದಲ್ಲಿ ಪ್ರಕಟಿಸಿದ್ದರು.

‘ತರುಣ ವರ್ಗ’ದಡಿ ಈ ಹಿಂದೆ ಸಾಲಗಳನ್ನು ಪಡೆದುಕೊಂಡು ಯಶಸ್ವಿಯಾಗಿ ಮರುಪಾವತಿ ಮಾಡಿರುವ ಉದ್ಯಮಿಗಳಿಗೆ ಮುದ್ರಾ ಸಾಲಮಿತಿಯನ್ನು ಈಗಿನ 10 ಲಕ್ಷ ರೂ.ಗಳಿಂದ 20 ಲಕ್ಷ ರೂ.ಗಳಿಗೆ ಹೆಚ್ಚಿಸಲಾಗುವುದು ಎಂದು ಅವರು ಹೇಳಿದ್ದರು.

ಸಾಲಮಿತಿ ಹೆಚ್ಚಳವು ಉದಯೋನ್ಮುಖ ಉದ್ಯಮಿಗಳಿಗೆ ತಮ್ಮ ಬೆಳವಣಿಗೆ ಮತ್ತು ವಿಸ್ತರಣೆಗೆ ವಿಶೇಷವಾಗಿ ಅನುಕೂಲಕರವಾಗಲಿದೆ. ಈ ಕ್ರಮವು ಉದ್ಯಮಶೀಲ ವ್ಯವಸ್ಥೆಯನ್ನು ಬೆಳೆಸುವ ಸರಕಾರದ ಬದ್ಧತೆಗೆ ಅನುಗುಣವಾಗಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Ismail

contributor

Byline - ವಾರ್ತಾಭಾರತಿ

contributor

Similar News