ಪ್ರಜ್ವಲ್ ರೇವಣ್ಣ ವಿದೇಶಕ್ಕೆ ತೆರಳಲು ಅನುಮತಿ ಕೇಳಿಲ್ಲ : ವಿದೇಶಾಂಗ ಸಚಿವಾಲಯ ಸ್ಪಷ್ಟನೆ
ಹೊಸದಿಲ್ಲಿ : "ಪ್ರಜ್ವಲ್ ರೇವಣ್ಣ ವಿದೇಶಕ್ಕೆ ತೆರಳಲು ಸಚಿವಾಲಯದಿಂದ ಯಾವುದೇ ಅನುಮತಿ ಕೇಳಿಲ್ಲ” ಎಂದು ವಿದೇಶಾಂಗ ಸಚಿವಾಲಯ ಸ್ಪಷ್ಟನೆ ನೀಡಿದೆ.
ಈ ಕುರಿತು ಗುರುವಾರ ಸುದ್ದಿಗೋಷ್ಠಿಯಲಿ ಮಾತನಾಡಿದ ವಿದೇಶಾಂಗ ಸಚಿವಾಲಯದ ವಕ್ತಾರ ರಣ್ಧೀರ್ ಜೈಸ್ವಾಲ್, “ಪ್ರಜ್ವಲ್ ರೇವಣ್ಣಗೆ ವಿದೇಶಾಂಗ ಸಚಿವಾಲಯದಿಂದ ಯಾವುದೇ ವೀಸಾ ನೋಟ್ ನೀಡಿಲ್ಲ. ಬದಲಾಗಿ ಅವರು ರಾಜತಾಂತ್ರಿಕ ಪಾಸ್‌ಪೋರ್ಟ್ ಮೂಲಕ ಜರ್ಮನಿಗೆ ಹೋಗಿದ್ದಾರೆ. ರಾಜತಾಂತ್ರಿಕ ಪಾಸ್ ಪೋರ್ಟ್ ಬಳಸಿ ವಿದೇಶಕ್ಕೆ ಹೋಗುವಾಗ ಅನುಮತಿ ಅಥವಾ ವೀಸಾದ ಅಗತ್ಯವಿಲ್ಲ” ಎಂದು ಅವರು ಹೇಳಿದ್ದಾರೆ.
#WATCH | On JD(S) MP Prajwal Revanna, MEA spokesperson Randhir Jaiswal says, "No political clearance was either sought from or issued by MEA in respect of the travel of the said MP to Germany. Obviously, no visa note was issued either. No visa is required for diplomatic passport… pic.twitter.com/wltTjWuVgo
— ANI (@ANI) May 2, 2024