ಬಿಹಾರ ವಿಧಾನಸಭೆ ಚುನಾವಣೆಯಲ್ಲಿ 40 ಮುಸ್ಲಿಂ ಅಭ್ಯರ್ಥಿಗಳನ್ನು ಕಣಕ್ಕಿಳಿಸುವಂತೆ ಆರ್‌ಜೆಡಿಗೆ ಪ್ರಶಾಂತ್ ಕಿಶೋರ್ ಸವಾಲು

Update: 2024-09-02 08:43 GMT

ಪ್ರಶಾಂತ್ ಕಿಶೋರ್ |  PC : PTI

ಪಾಟ್ನಾ: ಬಿಹಾರ ಚುನಾವಣೆಯಲ್ಲಿ ಆರ್‌ಜೆಡಿಯು ಮುಸ್ಲಿಂ ಸಮುದಾಯವನ್ನು ಮತಬ್ಯಾಂಕ್ ಆಗಿ ಬಳಸಿಕೊಳ್ಳುತ್ತಿದೆ ಎಂದು ಜನ್ ಸುರಾಜ್ ಪಕ್ಷದ ಮುಖ್ಯಸ್ಥ ಪ್ರಶಾಂತ್ ಕಿಶೋರ್ ಆರೋಪಿಸಿದ್ದಾರೆ.

ರಾಜ್ಯದಲ್ಲಿ ಮುಸ್ಲಿಂ ಅಭ್ಯರ್ಥಿಗಳಿಗೆ ಅವರ ಜನಸಂಖ್ಯೆಗೆ ಅನುಗುಣವಾಗಿ ವಿಧಾನಸಭಾ ಸ್ಥಾನಗಳನ್ನು ಹಂಚಿಕೆ ಮಾಡುವಂತೆ ಆರ್‌ಜೆಡಿಗೆ ಸವಾಲು ಹಾಕಿರುವ ಅವರು, ಸಮುದಾಯಕ್ಕೆ ಕನಿಷ್ಠ 40 ವಿಧಾನಸಭಾ ಸ್ಥಾನಗಳನ್ನು ನೀಡಬೇಕು ಎಂದು ಹೇಳಿದ್ದಾರೆ.

ಆರ್‌ಜೆಡಿ ಮುಸ್ಲಿಮರ ಕಲ್ಯಾಣಕ್ಕಾಗಿ ಕೆಲಸ ಮಾಡುವುದಾಗಿ ಹೇಳಿಕೊಂಡಿದ್ದಾರೆ. ಸಮುದಾಯಕ್ಕೆ ಚುನಾವಣೆಯಲ್ಲಿ ಪ್ರಾತಿನಿಧ್ಯ ನೀಡುತ್ತಿಲ್ಲ ಎಂದು ಕಿಶೋರ್ ಟೀಕಿಸಿದರು. 40 ಮಹಿಳೆಯರು ಸೇರಿದಂತೆ 243 ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ಯೋಜನೆಯೊಂದಿಗೆ 2025 ರ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಪಕ್ಷ ಜನ್ ಸುರಾಜ್ ಗೆಲುವು ಸಾಧಿಸಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ತಮ್ಮ ಪಕ್ಷದ ಆಡಳಿತದಲ್ಲಿ, ಉತ್ತಮ ಸಂಬಳಕ್ಕಾಗಿ ಯುವಜನರು ಬಿಹಾರದಿಂದ ವಲಸೆ ಹೋಗಿ ಉದ್ಯೋಗ ಮಾಡುವುದು ನಿಲ್ಲಲಿದೆ. ಮಹಿಳೆಯರು ಉದ್ಯೋಗಾವಕಾಶಗಳಿಗಾಗಿ ಆರ್ಥಿಕ ಬೆಂಬಲವನ್ನು ಪಡೆಯಲಿದ್ದಾರೆ ಎಂದು ಅವರು ಒತ್ತಿ ಹೇಳಿದರು.

2025 ರ ಅಕ್ಟೋಬರ್-ನವೆಂಬರ್‌ನಲ್ಲಿ ಬಿಹಾರ ವಿಧಾನಸಭಾ ಚುನಾವಣೆಗಳು ನಡೆಯಲಿವೆ.

Tags:    

Writer - ವಾರ್ತಾಭಾರತಿ

contributor

Editor - Ismail

contributor

Byline - ವಾರ್ತಾಭಾರತಿ

contributor

Similar News