ಎಂಎನ್ಎಫ್ ಜೊತೆ ಮೈತ್ರಿ ಮಾತುಕತೆ ವಿಫಲ: ಮಿಝೋರಾಂನಲ್ಲಿ ಕಾಂಗ್ರೆಸ್ ಏಕಾಂಗಿ ಸ್ಪರ್ಧೆ
ಐಝ್ವಾಲ್, ಮಾ.21: ಮಿಝೋ ನ್ಯಾಶನಲ್ ಫ್ರಂಟ್ ಜೊತೆಗೆ ಚುನಾವಣಾ ಪೂರ್ವ ಮೈತ್ರಿ ಯೇರ್ಪಡಿಸುವ ಕುರಿತ ಮಾತುಕತೆಗಳು ವಿಫಲವಾದ ಹಿನ್ನೆಲೆಯಲ್ಲಿ ಲೋಕಸಭಾ ಚುನಾವಣೆಗೆ ಮಿಝೋರಾಂನಲ್ಲಿ ಏಕಾಂಗಿಯಾಗಿ ಸ್ಪರ್ಧಿಸಲು ಕಾಂಗ್ರೆಸ್ ಪಕ್ಷ ಬುಧವಾರ ನಿರ್ಧರಿಸಿದೆ.
ಈಶಾನ್ಯ ರಾಜ್ಯವಾದ ಮಿಝೋರಾಂನ ಲೋಕಸಭಾ ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳ ಹೆಸರನ್ನು ಗುರುವಾರ ಘೋಷಿಸುವುದಾಗಿ ಕಾಂಗ್ರೆಸ್ ಪಕ್ಷ ತಿಳಿಸಿದೆ. ಮಿಝೋರಾಂನ ಆಡಳಿತಾರೂಢ ಝೋರಾಮ್ ಪೀಪಲ್ಸ್ ಮೂವ್ಮೆಂಟ್ (ಝಡ್ಪಿಎಂ) ವಿರುದ್ಧ ಚುನಾವಣಾ ಮೈತ್ರಿಯೇರ್ಪಡಿಸಿಕೊಂಡು ಹೋರಾಡಲು ಎಂಎನ್ಎಫ್ ಪಕ್ಷವು ಕಾಂಗ್ರೆಸ್ ಜೊತೆ ಮಾತುಕತೆ ನಡೆಸಿತ್ತು.
ಚುನಾವಣಾ ಮೈತ್ರಿ ಕುರಿತು ಈವರೆಗೆ ಯಾವುದೇ ಸಹಮತಕ್ಕೆ ಬರಲಾಗಲಿಲ್ಲ. ಹೀಗಾಗಿ ಕಾಂಗ್ರೆಸ್ ಪಕ್ಷವು ಏಕಾಂಗಿಯಾಗಿ ಕಣಕ್ಕಿಳಿಯಲು ನಿರ್ಧರಿಸಿದೆ’’ ಎಂದು ಕಾಂಗ್ರೆಸ್ ನಾಯಕರು ತಿಳಿಸಿದ್ದಾರೆ.
ಗುರುವಾರ ಐಝ್ವಾಲ್ನಲ್ಲಿ ಆಯೋಜಿಸಲಾದ ಕಾರ್ಯಕ್ರಮವೊಂದರಲ್ಲಿ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಲಾಲ್ ತಂಝಾರಾ ಅವರು ಅಭ್ಯರ್ಥಿಗಳ ಹೆಸರುಗಳನ್ನು ಪ್ರಕಟಿಸಲಿದ್ದಾರೆಂದು ಪಕ್ಷದ ಮೂಲಗಳು ತಿಳಿಸಿವೆ.