ಮುಂಗಾರು ಅಧಿವೇಶನದಲ್ಲಿ ಅಂಗೀಕಾರವಾದ 4 ಮಸೂದೆಗಳಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅಂಕಿತ
Update: 2023-08-12 06:38 GMT
ಹೊಸದಿಲ್ಲಿ: ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಅಂಗೀಕರಿಸಿದ ನಾಲ್ಕು ಮಸೂದೆಗಳಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು ಒಪ್ಪಿಗೆ ನೀಡಿದ್ದಾರೆ.
ಡಿಜಿಟಲ್ ಪರ್ಸನಲ್ ಡಾಟಾ ಪ್ರೊಟೆಕ್ಷನ್ ಬಿಲ್, ಜನನ ಹಾಗೂ ಮರಣಗಳ ನೋಂದಣಿ (ತಿದ್ದುಪಡಿ) ಮಸೂದೆ, ಜನ್ ವಿಶ್ವಾಸ್ (ನಿಬಂಧನೆಗಳ ತಿದ್ದುಪಡಿ) ಮಸೂದೆ ಹಾಗೂ ದಿಲ್ಲಿಯ ರಾಷ್ಟ್ರೀಯ ರಾಜಧಾನಿ ಪ್ರದೇಶದ ಸರಕಾರ (ತಿದ್ದುಪಡಿ) ಮಸೂದೆಗೆ ಈಗ ಸಹಿ ಹಾಕಲಾಗಿದೆ.
ಈ ಮಸೂದೆಗಳಲ್ಲಿ ಕನಿಷ್ಠ ಎರಡು, ಈಗ ಕಾನೂನಾಗಿ ಸಹಿ ಮಾಡಲಾಗಿದ್ದು, ಇವು ವಿರೋಧ ಪಕ್ಷಗಳಿಂದ ತೀವ್ರ ಪ್ರತಿರೋಧವನ್ನು ಎದುರಸಿದೆ.