ಬಾಬಾಸಾಹೇಬ್ ಅಂಬೇಡ್ಕರ್‌ ಜನ್ಮದಿನ:‌ ರಾಷ್ಟ್ರಪತಿ, ಪ್ರಧಾನಿಯಿಂದ ಪುಷ್ಪನಮನ

Update: 2024-04-14 06:09 GMT

Screengrab:X/@ANI

ಬೆಂಗಳೂರು: ಸಂವಿಧಾನ ಶಿಲ್ಪಿ ಡಾ. ಬಿ ಆರ್‌ ಅಂಬೇಡ್ಕರ್‌ ಅವರ 133 ನೇ ಜನ್ಮ ದಿನದ ಅಂಗವಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪರಾಷ್ಟ್ರಪತಿ ಜಗದೀಪ್‌ ಧನಕರ್‌, ಪ್ರಧಾನಿ ನರೇಂದ್ರ ಮೋದಿ ಅವರು ಸಂಸತ್‌ ಭವನದ ಆವರಣದಲ್ಲಿರುವ ಅಂಬೇಡ್ಕರ್‌ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿದರು.

“ನಮ್ಮ ಸಂವಿಧಾನ ಶಿಲ್ಪಿ ಬಾಬಾಸಾಹೇಬ್ ಭೀಮರಾವ್ ರಾಮ್‌ಜಿ ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯ ಸಂದರ್ಭದಲ್ಲಿ, ನಾನು ಎಲ್ಲಾ ಸಹ ನಾಗರಿಕರಿಗೆ ನನ್ನ ಆತ್ಮೀಯ ಶುಭಾಶಯಗಳನ್ನು ಸಲ್ಲಿಸುತ್ತೇನೆ” ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಶುಭಾಶಯ ತಿಳಿಸಿದ್ದಾರೆ.

ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಹಲವು ಗಣ್ಯರು ಅಂಬೇಡ್ಕರ್‌ ಜನ್ಮದಿನಕ್ಕೆ ಶುಭಾಶಯಗಳನ್ನು ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Irshad Venur

contributor

Byline - ವಾರ್ತಾಭಾರತಿ

contributor

Similar News