370ನೇ ವಿಧಿ ರದ್ದತಿ ಬಳಿಕ ಇದೇ ಪ್ರಥಮ ಬಾರಿಗೆ ಶ್ರೀನಗರಕ್ಕೆ ಭೇಟಿ ನೀಡಿದ ಪ್ರಧಾನಿ ಮೋದಿ

Update: 2024-03-07 09:19 GMT

ನರೇಂದ್ರ ಮೋದಿ | Photo: ANI

ಹೊಸದಿಲ್ಲಿ: ರೂ. 6,400 ಕೋಟಿಗೂ ಅಧಿಕ ಮೊತ್ತದ ಅಭಿವೃದ್ಧಿ ಕಾಮಗಾರಿಗಳನ್ನು ಉದ್ಘಾಟಿಸಲು ಹಾಗೂ ಸಾರ್ವಜನಿಕ ಸಭೆಯಲ್ಲಿ ಪಾಲ್ಗೊಳ್ಳಲು ಪ್ರಧಾನಿ ನರೇಂದ್ರ ಮೋದಿ ಇಂದು ಶ್ರೀನಗರಕ್ಕೆ ಭೇಟಿ ನೀಡಿದರು.

ಗುರುವಾರ ಶ್ರೀನಗರಕ್ಕೆ ಬಂದಿಳಿದ ಪ್ರಧಾನಿ ಮೋದಿ, ಆರ್ಮಿಸ್ 15 ಅಥವಾ ಚಿನಾರ್ ಕಾರ್ಪ್ಸ್‌ನ ಮುಖ್ಯ ಕಚೇರಿ ಇರುವ ಬಾದಾಮಿಬಾಘ್‌ ಕಂಟೋನ್ಮೆಂಟ್‌ಗೆ ತೆರಳಿದರು. ಅಲ್ಲಿ ಅವರು ಹುತಾತ್ಮ ಯೋಧರ ಸ್ಮಾರಕದೆದುರು ಹೂಗುಚ್ಛವನ್ನಿರಿಸಿ ಹುತಾತ್ಮ ಯೋಧರಿಗೆ ಗೌರವ ನಮನ ಸಲ್ಲಿಸಿದರು.

ಕಳೆದ ಮೂರು ವಾರಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಜಮ್ಮು ಮತ್ತು ಕಾಶ್ಮೀರಕ್ಕೆ ನೀಡುತ್ತಿರುವ ಎರಡನೆಯ ಭೇಟಿ ಇದಾಗಿದೆ. ಇದಕ್ಕೂ ಮುನ್ನ ಫೆಬ್ರವರಿ 20ರಂದು ಜಮ್ಮುವಿನಲ್ಲಿ ಆಯೋಜಿಸಲಾಗಿದ್ದ ಸಾರ್ವಜನಿಕ ಸಭೆಯಲ್ಲಿ ಅವರು ಪಾಲ್ಗೊಂಡಿದ್ದರು.

Tags:    

Writer - ವಾರ್ತಾಭಾರತಿ

contributor

Editor - Ismail

contributor

Byline - ವಾರ್ತಾಭಾರತಿ

contributor

Similar News