ಫೆ.13-14ರಂದು ಯುಎಇಗೆ ಪ್ರಧಾನಿ ಮೋದಿ ಭೇಟಿ

Update: 2024-02-10 16:53 GMT

ನರೇಂದ್ರ ಮೋದಿ , ಶೇಖ್ ಮುಹಮ್ಮದ್ ಬಿನ್ ಝಾಯೆದ್ ಅಲ್ ನಹ್ಯಾನ್ | Photo: PTI 

ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿಯವರು ಫೆ.13ರಿಂದ ಸಂಯುಕ್ತ ಅರಬ್ ಗಣರಾಜ್ಯ(ಯುಎಇ)ಗೆ ಎರಡು ದಿನಗಳ ಭೇಟಿಯನ್ನು ನೀಡಲಿದ್ದಾರೆ. ತನ್ನ ಭೇಟಿಯ ಅವಧಿಯಲ್ಲಿ ಅವರು ಅಧ್ಯಕ್ಷ ಶೇಖ್ ಮುಹಮ್ಮದ್ ಬಿನ್ ಝಾಯೆದ್ ಅಲ್ ನಹ್ಯಾನ್ ಅವರೊಂದಿಗೆ ವ್ಯಾಪಕ ಮಾತುಕತೆಗಳನ್ನು ನಡೆಸಿಲಿದ್ದಾರೆ. ಅಬುಧಾಬಿಯಲ್ಲಿ ಮೊದಲ ಹಿಂದು ದೇವಸ್ಥಾನವನ್ನು ಅವರು ಉದ್ಘಾಟಿಸಲಿದ್ದಾರೆ.   

ಪ್ರಧಾನಿ ಭೇಟಿ ಕಾರ್ಯಕ್ರಮವನ್ನು ಶನಿವಾರ ಪ್ರಕಟಿಸಿದ ವಿದೇಶಾಂಗ ವ್ಯವಹಾರಗಳ ಸಚಿವಾಲಯವು, 2015ರಿಂದ ಇದು ಯುಎಇಗೆ ಪ್ರಧಾನಿಯವರ ಏಳನೇ ಭೇಟಿಯಾಗಲಿದೆ ಎಂದು ತಿಳಿಸಿದೆ.

ಮೋದಿ ಮತ್ತು ಅಲ್ ನಹ್ಯಾನ್ ಉಭಯ ದೇಶಗಳ ನಡುವಿನ ವ್ಯೆಹಾತ್ಮಕ ಸಹಭಾಗಿತ್ವವನ್ನು ಇನ್ನಷ್ಟು ಬಲಗೊಳಿಸಲು ಮತ್ತು ವಿಸ್ತರಿಸಲು ಮಾರ್ಗೋಪಾಯಗಳನ್ನು ಚರ್ಚಿಸಲಿದ್ದಾರೆ ಹಾಗೂ ಪರಸ್ಪರ ಆಸಕ್ತಿಯ ಪ್ರಾದೇಶಿಕ ಮತ್ತು ಅಂತರರಾಷ್ಟ್ರೀಯ ವಿಷಯಗಳ ಕುರಿತು ಅಭಿಪ್ರಾಯಗಳನ್ನು ವಿನಿಮಯಿಸಿಕೊಳ್ಳಲಿದ್ದಾರೆ ಎಂದು ಸಚಿವಾಲಯವು ತಿಳಿಸಿದೆ.

ಯುಎಇ ಉಪಾಧ್ಯಕ್ಷ,ಪ್ರಧಾನಿ ಹಾಗೂ ರಕ್ಷಣಾ ಸಚಿವ ಶೇಖ್ ಮುಹಮ್ಮದ್ ಬಿನ್ ರಶೀದ್ ಅಲಿ ಮಕ್ತೂಮ್ ಅವರನ್ನೂ ಮೋದಿ ಭೇಟಿಯಾಗಲಿದ್ದಾರೆ.

ದುಬೈನಲ್ಲಿ ನಡೆಯಲಿರುವ ಸರಕಾರಿ ಶೃಂಗ 2024ರಲ್ಲಿ ಗೌರವ ಅತಿಥಿಯಾಗಿ ಪಾಲ್ಗೊಳ್ಳುವ ಮೋದಿ ವಿಶೇಷ ಮುಖ್ಯ ಭಾಷಣವನ್ನು ಮಾಡಲಿದ್ದಾರೆ. ಅಬುಧಾಬಿಯಲ್ಲಿ ಮೊದಲ ಹಿಂದು ದೇವಸ್ಥಾನ ಬಿಎಪಿಎಸ್ (ಬೋಚಾಸನವಾಸಿ ಅಕ್ಷರ ಪುರುಷೋತ್ತಮ ಸ್ವಾಮಿನಾರಾಯಣ ಸಂಸ್ಥಾ) ಮಂದಿರವನ್ನು ಅವರು ಉದ್ಘಾಟಿಸಲಿದ್ದಾರೆ. ಜೊತೆಗೆ ಅಬುಧಾಬಿಯ ಝಾಯೆದ್ ಸ್ಪೋರ್ಟ್ಸ್ ಸಿಟಿಯಲ್ಲಿ ಕಾರ್ಯಕ್ರಮವೊಂದರಲ್ಲಿ ಯುಎಇಯಲ್ಲಿನ ಭಾರತೀಯ ಸಮುದಾಯವನ್ನು ಉದ್ದೇಶಿಸಿ ಭಾಷಣವನ್ನೂ ಮಾಡಲಿದ್ದಾರೆ ಎಂದು ಸಚಿವಾಲಯವು ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - Ismail

contributor

Byline - ವಾರ್ತಾಭಾರತಿ

contributor

Similar News