ನವೆಂಬರ್ 28ರಂದು ಪ್ರಿಯಾಂಕಾ ಗಾಂಧಿ ಪ್ರಮಾಣ ವಚನ ?
ಹೊಸದಿಲ್ಲಿ : ಲೋಕಸಭೆಯ ಉಪ ಚುನಾವಣೆಯಲ್ಲಿ ಜಯ ಗಳಿಸಿದ ಪ್ರಿಯಾಂಕಾ ಗಾಂಧಿ ವಾದ್ರಾ ಹಾಗೂ ರವೀಂದ್ರ ಚೌಹಾಣ್ ಅವರು ಗುರುವಾರ ಸಂಸದರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ರಾಹುಲ್ ಗಾಂಧಿ ವಯನಾಡ್ ಲೋಕಸಭಾ ಕ್ಷೇತ್ರಕ್ಕೆ ರಾಜೀನಾಮೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ವಯನಾಡ್ ಲೋಕಸಭಾ ಕ್ಷೇತ್ರಕ್ಕೆ ನಡೆದ ಉಪ ಚುನಾವಣೆಯಲ್ಲಿ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಿ ಜಯ ಗಳಿಸಿದ್ದರು. ವಸಂತ ರಾವ್ ಚೌಹಾಣ್ ಅವರ ನಿಧನದ ಬಳಿಕ ತೆರವಾದ ನಾಂದೇಡ್ ಲೋಕಸಭಾ ಕ್ಷೇತ್ರಕ್ಕೆ ನಡೆದ ಉಪ ಚುನಾವಣೆಯಲ್ಲಿ ಸ್ಪರ್ಧಿಸಿದ ಅವರ ಪುತ್ರ ರವೀಂದ್ರ ಚೌಹಾಣ್ ತನ್ನ ಬಿಜೆಪಿಯ ಪ್ರತಿಸ್ಪರ್ಧಿಯನ್ನು ಸೋಲಿಸಿದ್ದರು.
ವಯನಾಡ್‌ನಲ್ಲಿ ಬುಧವಾರ ಕಾಂಗ್ರೆಸ್ ನಾಯಕರು ವಯನಾಡ್‌ನ ಚುನಾವಣಾ ಪ್ರಮಾಣ ಪತ್ರವನ್ನು ರಾಹುಲ್ ಗಾಂಧಿ ಅವರ ಉಪಸ್ಥಿತಿಯಲ್ಲಿ ಪ್ರಿಯಾಂಕಾ ಗಾಂಧಿ ಅವರಿಗೆ ಹಸ್ತಾಂತರಿಸಿದರು.
ವಯನಾಡ್ ಜನರ ಅಗಾಧ ಬೆಂಬಲ ಹಾಗೂ ನಂಬಿಕೆಗೆ ಪ್ರಿಯಾಂಕಾ ಗಾಂಧಿ ಕೃತಜ್ಞತೆ ಸಲ್ಲಿಸಿದರು. ಚುನಾವಣೆ ಸಂದರ್ಭ ನಾಯಕರ ಅಚಲ ಪ್ರಯತ್ನದ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದರು.
ಸಭೆಯಲ್ಲಿ ಪ್ರಿಯಾಂಕಾ ಗಾಂಧಿ ವಯನಾಡ್‌ನ ಅಭಿವ್ಯದ್ಧಿ ಹಾಗೂ ಕಲ್ಯಾಣಕ್ಕೆ ಸಂಘಟಿತರಾಗಿ ಕಾರ್ಯ ನಿರ್ವಹಣೆ ಹಾಗೂ ಸ್ಥಳೀಯರ ಸಮಸ್ಯೆಗಳನ್ನು ಪರಿಹರಿಸುವುದಕ್ಕೆ ಗಮನ ಕೇಂದ್ರೀಕರಿಸಿ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನಾಯಕರೊಂದಿಗೆ ಅರ್ಥಪೂರ್ಣ ಚರ್ಚೆ ನಡೆಸಿದರು ಎಂದು ಮೂಲಗಳು ತಿಳಿಸಿವೆ.