ಉವೈಸಿ ರ‍್ಯಾಲಿಯಲ್ಲಿ ಪಾಕಿಸ್ತಾನ ಪರ ಘೋಷಣೆ ಆರೋಪ; ಎಐಎಂಐಎಂ ಅಭ್ಯರ್ಥಿ, ಇತರರ ವಿರುದ್ಧ ಎಫ್‌ಐಆರ್ ದಾಖಲು

Update: 2023-08-31 15:23 GMT

ಅಸದುದ್ದೀನ್ ಉವೈಸಿ | Photo: PTI 

ರಾಂಚಿ (ಜಾರ್ಖಂಡ್): ದುಮ್ರಿ ಉಪ ಚುನಾವಣೆ ಹಿನ್ನೆಲೆಯಲ್ಲಿ ಎಐಎಂಐಎಂನ ಮುಖ್ಯಸ್ಥ ಅಸದುದ್ದೀನ್ ಉವೈಸಿ ರಾಂಚಿಯಲ್ಲಿ ಬುಧವಾರ ಆಯೋಜಿಸಿದ್ದ ಸಾರ್ವಜನಿಕ ರ‍್ಯಾಲಿ ಸಂದರ್ಭ ಪಾಕಿಸ್ತಾನ ಪರ ಘೋಷಣೆಗಳನ್ನು ಕೂಗಿದ ಆರೋಪದಲ್ಲಿ ಎಐಎಂಐಎಂ ಪಕ್ಷದ ಅಭ್ಯರ್ಥಿ ಹಾಗೂ ಇತರರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಎಐಎಂಐಎಂ ಪಕ್ಷದ ಅಭ್ಯರ್ಥಿ ಅಬ್ದುಲ್ ಮೊಬಿನ್ ರಿಝ್ವಿ, ಮುಝಪ್ಫರ್ ಹಸನ್ ನೂರಾನಿ ಹಾಗೂ ಇತರ ಅಪರಿಚಿತ ವ್ಯಕ್ತಿಗಳ ವಿರುದ್ಧ ಭಾರತೀಯ ದಂಡ ಸಹಿಂತೆ ಹಾಗೂ ಪ್ರಜಾಪ್ರತಿನಿಧಿ ಕಾಯ್ದೆಯ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಗಿರಿಧಿ ಜಿಲ್ಲಾಧಿಕಾರಿ ನಮನ್ ಪ್ರಿಯೇಶ್ ಲಾಕ್ರಾ ಹೇಳಿದ್ದಾರೆ.

ಉವೈಸಿ ಅವರು ತನ್ನ ಪಕ್ಷದ ಅಭ್ಯರ್ಥಿಯನ್ನು ಬೆಂಬಲಿಸಿ ಮಾತನಾಡುವ ಸಂದರ್ಭ ಸಭಿಕರು ‘ಪಾಕಿಸ್ತಾನ ಜಿಂದಾಬಾದ್’ ಘೋಷಣೆಗಳನ್ನು ಕೂಗಿರುವುದು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ವೀಡಿಯೊದಲ್ಲಿ ಕೇಳಿ ಬಂದಿದೆ.

ರ್ಯಾಲಿಯ ಸಂದರ್ಭ ಸಭಿಕರಿಂದ ಪಾಕಿಸ್ತಾನ ಪರ ಘೋಷಣೆಯ ಕೂಗು ಕೇಳಿ ಬಂದಿದೆ ಎಂದು ವೀಡಿಯೊವನ್ನು ಪರಿಶೀಲಿಸಲು ರೂಪಿಸಲಾದ ತನಿಖಾ ತಂಡ ಹೇಳಿದೆ ಎಂದು ಜಿಲ್ಲಾಡಳಿತದ ಅಧಿಕಾರಿಗಳು ತಿಳಿಸಿದ್ದಾರೆ. ಈ ಕೃತ್ಯ ಮಾದರಿ ನೀತಿ ಸಂಹಿತೆಯ ಉಲ್ಲಂಘನೆ ಹಾಗೂ ಕೋಮು ಸಾಮರಸ್ಯವನ್ನು ಕದಡುವ ಪ್ರಯತ್ನ ಎಂದು ಅವರು ಅವರು ಹೇಳಿದ್ದಾರೆ. 

Tags:    

Writer - ವಾರ್ತಾಭಾರತಿ

contributor

Editor - Ismail

contributor

Byline - ವಾರ್ತಾಭಾರತಿ

contributor

Similar News