ಜನಗಣತಿ ಪ್ರಕ್ರಿಯೆಗೆ ಚಾಲನೆ: ಜಾತಿಗಣತಿ ಬಗ್ಗೆ ಮುಕ್ತ ಎಂದ ಸರ್ಕಾರ

Update: 2024-09-16 02:30 GMT

ಸಾಂದರ್ಭಿಕ ಚಿತ್ರ (PTI)

ಹೊಸದಿಲ್ಲಿ: ಜನಗಣತಿ ನಡೆಸುವ ಪ್ರಕ್ರಿಯೆಗೆ ಚಾಲನೆ ನೀಡಲಾಗಿದ್ದು, ಈ ಕುರಿತ ಅಧಿಕೃತ ಘೋಷಣೆ ಸದ್ಯದಲ್ಲೇ ಹೊರಬೀಳಲಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ. ಕೋವಿಡ್ ಸಾಂಕ್ರಾಮಿಕದಿಂದ ವಿಳಂಬವಾಗಿರುವ ಈ ಪ್ರಕ್ರಿಯೆಯಲ್ಲಿ ಜಾತಿ ಕಾಲಂ ಸೇರಿಸುವ ಬಗ್ಗೆ ಮುಕ್ತ ಮನಸ್ಸು ಹೊಂದಿರುವುದಾಗಿ ಸ್ಪಷ್ಟಪಡಿಸಿದೆ.

ಜನಗಣತಿ ನಡೆಸುವ ಸಂಬಂಧ ಕೆಲಸಗಳು ಈಗಾಗಲೇ ಆರಂಭವಾಗಿವೆ. ಈ ಬಗ್ಗೆ ಸದ್ಯದಲ್ಲೇ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಹಲವು ವಿರೋಧ ಪಕ್ಷಗಳು ಮತ್ತು ಬಿಜೆಪಿ ಮಿತ್ರಪಕ್ಷಗಳು ಜಾತಿಗಣತಿಗಾಗಿ ಆಗ್ರಹಿಸುತ್ತಿದ್ದು, ಇದರ ಅಂಕಿ ಅಂಶಗಳನ್ನು 'ರಾಜಕೀಯ'ಕ್ಕೆ ಬಳಸದೇ ಕಲ್ಯಾಣ ಯೋಜನೆಗಳಿಗೆ ಬಳಸುವುದಾದರೆ ಯಾವುದೇ ಸಮಸ್ಯೆ ಇಲ್ಲ ಎಂದು ಆರೆಸ್ಸೆಸ್ ಕೂಡಾ ಹಸಿರು ನಿಶಾನೆ ತೋರಿದೆ. ಸರ್ಕಾರದ ಪ್ರಮುಖ ಆದ್ಯತೆಯಾಗಿರುವ ಒಂದು ದೇಶ ಒಂದು ಚುನಾವಣೆ ಪರಿಕಲ್ಪನೆಯನ್ನು ಮೋದಿ ಸರ್ಕಾರದ ಅಧಿಕಾರಾವಧಿಯಲ್ಲೇ ಜಾರಿಗೆ ತರಲಾಗುವುದು ಎಂದು ಬಹಿರಂಗಪಡಿಸಿದ್ದಾರೆ.

ಕೊನೆಯದಾಗಿ 1931ರಲ್ಲಿ ನಡೆದ ಜನಗಣತಿ ಸಂದರ್ಭದಲ್ಲಿ ಜಾತಿ ಕಾಲಂ ಇತ್ತು. ಸ್ವಾತಂತ್ರ್ಯ ಬಳಿಕ ಸರ್ಕಾರ ಇದನ್ನು ಕೈಬಿಟ್ಟಿತ್ತು. ಈ ದಶಕದ ಜನಗಣತಿಯ ಮೊದಲ ಹಂತ 2020ರ ಎಪ್ರಿಲ್ ರಂದು ಆರಂಭವಾಗಬೇಕಿತ್ತು. ಆದರೆ ಕೋವಿಡ್-19 ಸಾಂಕ್ರಾಮಿಕದಿಂದಾಗಿ ಮುಂದೂಡಲ್ಪಟ್ಟಿತ್ತು. ಕಳೆದ ವರ್ಷ ಸಂಸತ್ತು ಜಾರಿಗೆ ತಂದ ಮಹಿಳಾ ಮೀಸಲಾತಿ ಕಾಯ್ದೆಯ ಜಾರಿ ಕೂಡಾ ಜನಗಣತಿಯನ್ನು ಅವಲಂಬಿಸಿದೆ.

Tags:    

Writer - ವಾರ್ತಾಭಾರತಿ

contributor

Editor - Irshad Venur

contributor

Byline - ವಾರ್ತಾಭಾರತಿ

contributor

Similar News