ಪಹಲ್ಗಾಮ್ ಭಯೋತ್ಪಾದಕ ದಾಳಿ: ದಾಳಿಕೋರರಿಗೆ ಸೂಕ್ತ ಶಿಕ್ಷೆ ನೀಡುವಂತೆ ಕೇಂದ್ರ ಸರಕಾರಕ್ಕೆ ಆರೆಸ್ಸೆಸ್ ಆಗ್ರಹ

Update: 2025-04-23 12:17 IST
ಪಹಲ್ಗಾಮ್ ಭಯೋತ್ಪಾದಕ ದಾಳಿ: ದಾಳಿಕೋರರಿಗೆ ಸೂಕ್ತ ಶಿಕ್ಷೆ ನೀಡುವಂತೆ ಕೇಂದ್ರ ಸರಕಾರಕ್ಕೆ ಆರೆಸ್ಸೆಸ್ ಆಗ್ರಹ

Photo credit: PTI

  • whatsapp icon

ಮುಂಬೈ: ಜಮ್ಮುಕಾಶ್ಮೀರದ ಪಹಲ್ಗಾಮ್‌ನಲ್ಲಿ 26 ಪ್ರವಾಸಿಗರ ಹತ್ಯೆಯನ್ನು ಆರೆಸ್ಸೆಸ್ ಖಂಡಿಸಿದೆ. ದಾಳಿಗೆ ಕಾರಣರಾದವರಿಗೆ ಸೂಕ್ತ ಶಿಕ್ಷೆ ನೀಡುವಂತೆ ಕೇಂದ್ರ ಸರಕಾರಕ್ಕೆ ಆಗ್ರಹಿಸಿದೆ.

ʼಜಮ್ಮುಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿ ಅತ್ಯಂತ ಖಂಡನೀಯ ಮತ್ತು ಹೃದಯ ವಿದ್ರಾವಕವಾಗಿದೆ. ನಾವು ಮೃತರಿಗೆ ಶ್ರದ್ಧಾಂಜಲಿ ಸಲ್ಲಿಸುತ್ತೇವೆ ಮತ್ತು ದಾಳಿಯಲ್ಲಿ ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲು ಪ್ರಾರ್ಥಿಸುತ್ತೇವೆʼ ಎಂದು ಆರೆಸ್ಸೆಸ್ ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ ಹೇಳಿದ್ದಾರೆ.

ʼಇದು ನಮ್ಮ ರಾಷ್ಟ್ರದ ಏಕತೆ ಮತ್ತು ಸಮಗ್ರತೆಯ ಮೇಲಿನ ದಾಳಿಯಾಗಿದೆ. ಎಲ್ಲಾ ರಾಜಕೀಯ ಪಕ್ಷಗಳು ಮತ್ತು ಸಂಘಗಳು ತಮ್ಮ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ಈ ಭಯೋತ್ಪಾದಕ ಕೃತ್ಯವನ್ನು ಖಂಡಿಸಬೇಕು. ಸರಕಾರ ಸಂತ್ರಸ್ತ ಕುಟುಂಬಗಳಿಗೆ ಅಗತ್ಯವಿರುವ ಎಲ್ಲಾ ಪರಿಹಾರ ಮತ್ತು ನೆರವನ್ನು ನೀಡಬೇಕು. ಈ ದಾಳಿಗೆ ಕಾರಣರಾದವರಿಗೆ ಸೂಕ್ತ ಶಿಕ್ಷೆಯನ್ನು ನೀಡಬೇಕುʼ ಎಂದು ದತ್ತಾತ್ರೇಯ ಹೊಸಬಾಳೆ ಹೇಳಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Irshad Venur

contributor

Byline - ವಾರ್ತಾಭಾರತಿ

contributor

Similar News