"ನಾನು ಆಪ್ ಗೆ ಮತ ಹಾಕುತ್ತೇನೆ": ಇಂಡಿಯಾ ಮೈತ್ರಿಕೂಟದ ಏಕತೆ ಪರ ರಾಹುಲ್ ಗಾಂಧಿ ಬ್ಯಾಟಿಂಗ್

Update: 2024-05-19 11:05 GMT

Photo: PTI

ಹೊಸದಿಲ್ಲಿ: ರಾಷ್ಟ್ರ ರಾಜಧಾನಿಯಲ್ಲಿ ಎರಡು ಪಕ್ಷಗಳ ಗಾಢ ಮೈತ್ರಿಯ ದ್ಯೋತಕವಾಗಿ ಪ್ರಸಕ್ತ ಲೋಕಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಾರ್ಟಿಯ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರು ಕಾಂಗ್ರೆಸ್ ಅಭ್ಯರ್ಥಿಗೆ ಮತ್ತು ನಾನು ಆಮ್ ಆದ್ಮಿ ಪಕ್ಷದ ಅಭ್ಯರ್ಥಿಗೆ ಮತ ಹಾಕಲಿದ್ದೇವೆ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಬಹಿರಂಗಪಡಿಸಿದ್ದಾರೆ.

"ಕೇಜ್ರಿವಾಲ್ ಕಾಂಗ್ರೆಸ್ ಪಕ್ಷದ ಎದುರು ಇರುವ ಬಟನ್ ಒತ್ತಲಿದ್ದಾರೆ ಹಾಗೂ ನಾನು ಎಎಪಿ ಬಟನ್ ಒತ್ತುತ್ತೇನೆ" ಎಂದು ವಯನಾಡ್ ಸಂಸದರಾಗಿರುವ ಅವರು ಇಂಡಿಯಾ ಮೈತ್ರಿಕೂಟದ ಬೆಂಬಲಾರ್ಥವಾಗಿ ಆಯೋಜಿಸಿದ್ದ ಬೃಹತ್ ರ್ಯಾಲಿಯಲ್ಲಿ ಸ್ಪಷ್ಟಪಡಿಸಿದರು.

ರಾಷ್ಟ್ರ ರಾಜಧಾನಿಯ ಎಲ್ಲ ಏಳು ಕ್ಷೇತ್ರಗಳಲ್ಲಿ ಮೈತ್ರಿಕೂಟದ ಅಭ್ಯರ್ಥಿಗಳ ಜಯ ಸಾಬೀತುಪಡಿಸಲು ಕಾಂಗ್ರೆಸ್ ಹಾಗೂ ಆಮ್ ಆದ್ಮಿ ಪಕ್ಷದ ಕಾರ್ಯಕರ್ತರು ಒಗ್ಗೂಡಿ ಕಾರ್ಯನಿರ್ವಹಿಸಬೇಕು ಎಂದು ಅವರು ಮನವಿ ಮಾಡಿದರು.

ಭಾರತಕ್ಕೆ ಸಂಬಂಧಿಸಿದ ವಿಷಯಗಳ ಬಗ್ಗೆ ಚರ್ಚೆಗೆ ಬನ್ನಿ ಎಂದು ಅವರು ಪ್ರಧಾನಿ ನರೇಂದ್ರ ಮೋದಿಯವರಿಗೆ ಸವಾಲು ಹಾಕಿದರು.

ಸುಪ್ರೀಂಕೋರ್ಟ್‍ನ ನಿವೃತ್ತ ನ್ಯಾಯಮೂರ್ತಿ ಮದನ್ ಬಿ ಲೋಕೂರ, ಅಜಿತ್ ಪಿ ಶಾ, ಹಿರಿಯ ಪತ್ರಕರ್ತ ಎನ್.ರಾಮ್ ಅವರು ಇತ್ತೀಚಿಗೆ ಗಾಂಧಿ ಹಾಗೂ ಪ್ರಧಾನಿಗೆ ಪತ್ರ ಬರೆದು ಚುನಾವಣಾ ವಿಷಯಗಳ ಬಗೆಗಿನ ಚರ್ಚೆಗೆ ಒಂದೇ ವೇದಿಕೆಗೆ ಬರುವಂತೆ ಆಹ್ವಾನಿಸಿದ್ದರು.

Tags:    

Writer - ವಾರ್ತಾಭಾರತಿ

contributor

Editor - Ashfaq

contributor

Byline - ವಾರ್ತಾಭಾರತಿ

contributor

Similar News