2018ರ ಮಾನಹಾನಿ ಪ್ರಕರಣ: ರಾಹುಲ್ ಗಾಂಧಿಗೆ ಜಾಮೀನು ಮಂಜೂರು
ಸುಲ್ತಾನ್‌ಪುರ್: ಆಗಸ್ಟ್ 2018ರ ಮಾನಹಾನಿ ಪ್ರಕರಣದಲ್ಲಿ ಮಂಗಳವಾರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಜಾಮೀನು ಮಂಜೂರಾಗಿದೆ.
ಆಗಸ್ಟ್ 2018ರಲ್ಲಿ ಬಿಜೆಪಿ ನಾಯಕರೊಬ್ಬರು ರಾಹುಲ್ ಗಾಂಧಿ ವಿರುದ್ಧ ದಾಖಲಿಸಿದ್ದ ಮಾನಹಾನಿ ಪ್ರಕರಣದಲ್ಲಿ ತನ್ನೆದುರು ಹಾಜರಾಗುವಂತೆ ಸುಲ್ತಾನ್‌ಪುರ್‌ನಲ್ಲಿನ ಜಿಲ್ಲಾ ಸಿವಿಲ್ ನ್ಯಾಯಾಲಯವು 36 ಗಂಟೆಗಳಿಗೂ ಮುಂಚೆ ರಾಹುಲ್ ಗಾಂಧಿ ಅವರಿಗೆ ಸಮನ್ಸ್ ಜಾರಿಗೊಳಿಸಿತ್ತು.
ಈ ಕುರಿತು ಎಕ್ಸ್ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿರುವ ರಾಹುಲ್ ಗಾಂಧಿ, "ಆಗಸ್ಟ್ 2018ರಲ್ಲಿ ಬಿಜೆಪಿ ನಾಯಕರೊಬ್ಬರು ರಾಹುಲ್ ಗಾಂಧಿ ವಿರುದ್ಧ ದಾಖಲಿಸಿದ್ದ ಮಾನಹಾನಿ ಪ್ರಕರಣದಲ್ಲಿ 36 ಗಂಟೆ ಮುಂಚೆ ಅವರಿಗೆ ಸಮನ್ಸ್ ಜಾರಿಗೊಳಿಸಲಾಗಿದ್ದು, ಇಂದು ಅವರು ಸುಲ್ತಾನ್‌ಪುರ್‌ನಲ್ಲಿನ ಜಿಲ್ಲಾ ಸಿವಿಲ್ ನ್ಯಾಯಾಲಯದೆದುರು ಹಾಜರಾಗಲಿದ್ದಾರೆ. ಭಾರತ್ ಜೋಡೊ ನ್ಯಾಯ ಯಾತ್ರೆಯ ಹಳಿ ತಪ್ಪಿಸಲು ಸಾಧ್ಯವಿಲ್ಲ. ರಾಹುಲ್ ಗಾಂಧಿಯನ್ನು ಮೌನವಾಗಿಸಲು ಸಾಧ್ಯವಿಲ್ಲ. ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷವನ್ನು ಬೆದರಿಸಲು ಸಾಧ್ಯವಿಲ್ಲ" ಎಂದು ಬರೆದುಕೊಂಡಿದ್ದಾರೆ.
ಭಾರತ್ ಜೋಡೊ ನ್ಯಾಯ ಯಾತ್ರೆಯು ಮಂಗಳವಾರ 38ನೇ ದಿನವನ್ನು ಪ್ರವೇಶಿಸಿದೆ. ಇಂದು ಅಮೇಥಿ ಜಿಲ್ಲೆಯ ಫುರ್ಸಂತ್ ಗಂಜ್ ನಿಂದ ಪ್ರಾರಂಭವಾಗಲಿರುವ ಯಾತ್ರೆಯು, ರಾಯ್ ಬರೇಲಿ ಹಾಗೂ ಲಕ್ನೊದತ್ತ ತೆರಳಲಿದೆ.