ಮೋದಿ ಉಪನಾಮ ಪ್ರಕರಣ: ಸುಪ್ರೀಂಕೋರ್ಟ್ ಮೊರೆ ಹೋದ ರಾಹುಲ್ ಗಾಂಧಿ
Update: 2023-07-15 11:45 GMT
ಹೊಸದಿಲ್ಲಿ: ಮೋದಿ ಉಪನಾಮ ಹೇಳಿಕೆಗೆ ಸಂಬಂಧಿಸಿದ ಮಾನನಷ್ಟ ಮೊಕದ್ದಮೆಯಲ್ಲಿ ನೀಡಲಾದ ಶಿಕ್ಷೆಗೆ ತಡೆ ನೀಡಲು ಗುಜರಾತ್ ಹೈಕೋರ್ಟ್ ನಿರಾಕರಿಸಿದ್ದಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.
ಮಾರ್ಚ್ 24, 2023 ರಂದು ಗುಜರಾತ್ ನ್ಯಾಯಾಲಯವು ಮೋದಿ ಉಪನಾಮ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ರಾಹುಲ್ ಗಾಂಧಿಗೆ ಎರಡು ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿತ್ತು. ಇದರ ಬೆನ್ನಲ್ಲೇ ರಾಹುಲ್ ಗಾಂಧಿ ಅವರ ಸಂಸತ್ ಸದಸ್ಯತ್ವದಿಂದ ಅನರ್ಹಗೊಳಿಸಲಾಗಿತ್ತು.
ಕೆಳ ನ್ಯಾಯಾಲಯದ ತೀರ್ಪಿನ ವಿರುದ್ಧ ರಾಹುಲ್ ಗಾಂಧಿ ಅವರು ಗುಜರಾತ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಆದರೆ, ಕೆಳ ನ್ಯಾಯಾಲಯದ ತೀರ್ಪಿಗೆ ತಡೆ ನೀಡಲು ಹೈಕೋರ್ಟ್ ನಿರಾಕರಿಸಿತ್ತು.