ಸ್ಮೃತಿ ಇರಾನಿ ಬಗ್ಗೆ ಅಪಹಾಸ್ಯ ಬೇಡ : ಬೆಂಬಲಿಗರಿಗೆ ರಾಹುಲ್ ಮನವಿ

Update: 2024-07-12 12:18 GMT

Photo : indianexpress

ಹೊಸದಿಲ್ಲಿ : ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಉತ್ತರ ಪ್ರದೇಶದ ಅಮೇಥಿ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿ ಕಿಶೋರಿ ಲಾಲ್ ಶರ್ಮಾ ವಿರುದ್ಧ ಸೋತಿರುವ ಬಿಜೆಪಿ ನಾಯಕಿ ಸ್ಮೃತಿ ಇರಾನಿ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡದಂತೆ, ವಿಪಕ್ಷ ನಾಯಕ ರಾಹುಲ್ ಗಾಂಧಿ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಮನವಿ ಮಾಡಿದ್ದಾರೆ.

ಈ ಕುರಿತು ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, “ ಸೋಲು–ಗೆಲುವು ಸಾಮಾನ್ಯ. ಸ್ಮೃತಿ ಇರಾನಿ ಅಥವಾ ಇತರ ಯಾವುದೇ ನಾಯಕರ ಬಗ್ಗೆ ಅವಹೇಳನಕಾರಿ ಪದಗಳನ್ನು ಬಳಸಬಾರದು. ಅಪಹಾಸ್ಯ ಮಾಡುವುದನ್ನು ನಿಲ್ಲಿಸುವಂತೆ ನಾನು ಎಲ್ಲರಲ್ಲೂ ಮನವಿ ಮಾಡುತ್ತೇನೆ. ನಾವು ಮತ್ತೊಬ್ಬರನ್ನು ಅವಮಾನಿಸುವುದೆಂದರೆ ಅದು ದೌರ್ಬಲ್ಯದ ಸಂಕೇತವಾಗುತ್ತದೆಯೇ ಹೊರತು ನಮ್ಮ ಶಕ್ತಿಯಲ್ಲ’ ಎಂದು ತಿಳಿಸಿದ್ದಾರೆ.

ಅಮೇಥಿಯಲ್ಲಿ ಕಾಂಗ್ರೆಸ್ ನಾಯಕ ಕಿಶೋರಿ ಲಾಲ್ ಶರ್ಮಾ ಅವರು ಸ್ಮೃತಿ ಇರಾನಿ ಅವರನ್ನು 1.5 ಲಕ್ಷ ಮತಗಳ ಅಂತರದಿಂದ ಸೋಲಿಸಿದ್ದರು. ಕಾಂಗ್ರೆಸ್ ನ ಭದ್ರಕೋಟೆಯಾಗಿದ್ದ ಅಮೇಥಿಯನ್ನು 2019 ರ ಲೋಕಸಭಾ ಚುನಾವಣೆಯಲ್ಲಿ ರಾಹುಲ್‌ ಗಾಂಧಿ ಅವರನ್ನು ಸೋಲಿಸಿ ಸ್ಮೃತಿ ಇರಾನಿ ಗೆಲ್ಲವ ಮೂಲಕ ಬಿಜೆಪಿ ವಶಪಡಿಸಿಕೊಂಡಿತ್ತು.

ಸ್ಮೃತಿ ಇರಾನಿ ಸೋಲಿನ ಕುರಿತು ಕಾಂಗ್ರೆಸ್‌ ಕಾರ್ಯಕರ್ತರು ಸಾಮಾಜಿಕ ಮಾಧ್ಯಮಗಳಲ್ಲಿ ಟ್ರೋಲ್ ಮಾಡುತ್ತಿದ್ದರು. ಈ ಕುರಿತು ರಾಹುಲ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Naufal

contributor

Byline - ವಾರ್ತಾಭಾರತಿ

contributor

Similar News