ಮಹಾಕಾಳೇಶ್ವರ ದೇಗುಲಕ್ಕೆ ಭೇಟಿ ನೀಡಿದ ರಾಹುಲ್ ಗಾಂಧಿ : ಮೋದಿ ಘೋಷಣೆ ಕೂಗಿದ ಬಿಜೆಪಿ ಕಾರ್ಯಕರ್ತರು

Update: 2024-03-05 13:30 GMT

 ರಾಹುಲ್ ಗಾಂಧಿ | Photo: PTI  

ಭೋಪಾಲ್ : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಧ್ಯಪ್ರದೇಶದ ಉಜ್ಜಯನಿ ನಗರದ ಮಹಾಕಾಳೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ, ದೇವಸ್ಥಾನದ ಹೊರಗಡೆ ಬಿಜೆಪಿ ಕಾರ್ಯಕರ್ತರು “ಮೋದಿ..ಮೋದಿ…” ಎಂದು ಘೋಷಣೆ ಕೂಗಿದ್ದಾರೆ ಎಂದು ವರದಿಯಾಗಿದೆ.

ರಾಹುಲ್ ಗಾಂಧಿ ನೇತೃತ್ವದ ಭಾರತ ಜೋಡೋ ನ್ಯಾಯ ಯಾತ್ರೆಯು ಮಧ್ಯಪ್ರದೇಶಲ್ಲಿ ಸಾಗುತ್ತಿದ್ದು, ಯಾತ್ರೆಯ ಭಾಗವಾಗಿ ಮಧ್ಯಪ್ರದೇಶದ ಮುಖ್ಯಮಂತ್ರಿ ಮೋಹನ್ ಯಾದವ್ ಅವರ ಕ್ಷೇತ್ರವಾದ ಉಜ್ಜಯಿನಿ ನಗರದ ಮಹಾಕಾಳೇಶ್ವರ ದೇಗುಲಕ್ಕೆ ರಾಹುಲ್ ಗಾಂಧಿ ಭೇಟಿ ನೀಡಿದರು. ಅವರು ಪ್ರಾರ್ಥನೆ ಸಲ್ಲಿಸಿ, ದೇವಸ್ಥಾನದಿಂದ ಹೊರಗೆ ಬರುವ ಸಂದರ್ಭದಲ್ಲಿ “ಮೋದಿ..ಮೋದಿ..” ಎಂದು ಘೋಷಣೆಯನ್ನು ಕೂಗಿರುವ ವೀಡಿಯೊ ತುಣಕನ್ನು ಸುದ್ದಿ ಸಂಸ್ಥೆ ಎಎನ್‌ಐ ಎಕ್ಸ್ ನಲ್ಲಿ ಪೋಸ್ಟ್ ಮಾಡಿದೆ.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News