ಪತ್ರಕರ್ತರ ಮನೆಗಳ ಮೇಲೆ ದಿಲ್ಲಿ ಪೊಲೀಸ್ ದಾಳಿ: ಪ್ರೆಸ್ ಕ್ಲಬ್ ಆಫ್ ಇಂಡಿಯಾ ಕಳವಳ
raids on journalists; Press Club of India expresses concern
ಹೊಸದಿಲ್ಲಿ: ಮಂಗಳವಾರ ಬೆಳಿಗ್ಗೆ ದಿಲ್ಲಿ ಪೊಲೀಸರ ವಿಶೇಷ ದಳ ಸುದ್ದಿ ಸಂಸ್ಥೆ ನ್ಯೂಸ್‌ಕ್ಲಿಕ್ ಮತ್ತು ಅದರ ಪತ್ರಕರ್ತರ ಮನೆ, ಕಛೇರಿಗಳ ದಾಳಿ ನಡೆಸಿದ್ದು, ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಆಕ್ರೋಶವನ್ನು ಉಂಟುಮಾಡಿದೆ. ಜಾರಿ ನಿರ್ದೇಶನಾಲಯವು ಈ ಹಿಂದೆ ಸಂಸ್ಥೆಯ ಕಛೇರಿಗೆ ದಾಳಿ ನಡೆಸಿ ಅದರ ಹಣಕಾಸಿನ ಮೂಲಗಳನ್ನು ತನಿಖೆ ಮಾಡಿತ್ತು. ಕೇಂದ್ರೀಯ ಸಂಸ್ಥೆ ಒದಗಿಸಿದ ಮಾಹಿತಿಯ ಆಧಾರದ ಮೇಲೆ ಪೊಲೀಸರು ಈಗ ಮಾಧ್ಯಮ ಸಂಸ್ಥೆಯ ಮೇಲೆ ದಾಳಿ ನಡೆಸಿದೆ.
ದಿಲ್ಲಿ ಪೊಲೀಸರು ಹೊಸ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ ಎಂದು ಅಧಿಕಾರಿಗಳನ್ನು ಉಲ್ಲೇಖಿಸಿ ಪಿಟಿಐ ವರದಿ ಮಾಡಿದೆ.
ನ್ಯೂಸ್‌ಕ್ಲಿಕ್‌ನ ಕೆಲವು ಪತ್ರಕರ್ತರ ಲ್ಯಾಪ್‌ಟಾಪ್‌ಗಳು ಮತ್ತು ಮೊಬೈಲ್ ಫೋನ್‌ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಕೆಲವು ಪತ್ರಕರ್ತರನ್ನು ವಿಚಾರಣೆಗಾಗಿ ಕರೆತರಲಾಗಿದ್ದು, ಇದುವರೆಗೆ ಯಾರನ್ನೂ ಬಂಧಿಸಲಾಗಿಲ್ಲ ಎಂದು ವರದಿಯಾಗಿದೆ.
ಈ ಬೆಳವಣಿಗೆಗಳ ಬಗ್ಗೆ ಪ್ರತಿಕ್ರಿಯಿಸಿದ ಪ್ರೆಸ್ ಕ್ಲಬ್ ಆಫ್ ಇಂಡಿಯಾ, ನ್ಯೂಸ್‌ಕ್ಲಿಕ್‌ಗೆ ಸಂಬಂಧಿಸಿದ ಪತ್ರಕರ್ತರು ಮತ್ತು ಬರಹಗಾರರ ಮನೆಗಳ ಮೇಲೆ ದಾಳಿಗಳ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದೆ.
"ನ್ಯೂಸ್ ಕ್ಲಿಕ್‌ಗೆ ಸಂಬಂಧಿಸಿದ ಪತ್ರಕರ್ತರು ಮತ್ತು ಬರಹಗಾರರ ಮನೆಗಳ ಮೇಲೆ ನಡೆಸಿದ ದಾಳಿಗಳ ಬಗ್ಗೆ ಪ್ರೆಸ್ ಕ್ಲಬ್ ಆಫ್ ಇಂಡಿಯಾ ತೀವ್ರ ಕಳವಳ ವ್ಯಕ್ತಪಡಿಸಿದೆ. ನಾವು ಬೆಳವಣಿಗೆಗಳನ್ನು ಗಮನಿಸುತ್ತಿದ್ದೇವೆ ಮತ್ತು ವಿವರವಾದ ಹೇಳಿಕೆಯನ್ನು ಬಿಡುಗಡೆ ಮಾಡುತ್ತೇವೆ. ಪತ್ರಕರ್ತರಿಗೆ ಬೆಂಬಲ ವ್ಯಕ್ತಪಡಿಸಿದ ಪಿಸಿಐ, ಸರ್ಕಾರವು ವಿವರಗಳೊಂದಿಗೆ ಹೊರ ತರಬೇಕು” ಎಂದು ತಿಳಿಸಿದ್ದಾರೆ.