ತೀವ್ರ ತಾಪಮಾನ | ನಾಗರಿಕರ ರಕ್ಷಣೆಗೆ ಸ್ವಯಂ ಪ್ರೇರಿತವಾಗಿ ಪ್ರಕರಣ ಕೈಗೆತ್ತಿಕೊಂಡ ರಾಜಸ್ಥಾನ ಹೈಕೋರ್ಟ್
Update: 2025-04-18 14:47 IST

ಸಾಂದರ್ಭಿಕ ಚಿತ್ರ (PTI)
ಹೊಸದಿಲ್ಲಿ : ತೀವ್ರ ತಾಪಮಾನದಿಂದ ತತ್ತರಿಸಿರುವ ರಾಜಸ್ಥಾನದಲ್ಲಿ ಪರಿಹಾರ ಕ್ರಮಗಳನ್ನು ಕೈಗೊಳ್ಳಲು ರಾಜ್ಯ ಸರಕಾರ ವಿಫಲವಾಗಿರುವ ಹಿನ್ನೆಲೆ ರಾಜಸ್ಥಾನ ಹೈಕೋರ್ಟ್ ಗುರುವಾರ ಸ್ವಯಂ ಪ್ರೇರಿತ ಮೊಕದ್ದಮೆಯನ್ನು ದಾಖಲಿಸಿಕೊಂಡು ವಿಚಾರಣೆಯನ್ನು ಕೈಗೆತ್ತಿಕೊಂಡಿದೆ.
ʼರಾಜಸ್ಥಾನದಲ್ಲಿ ಮುಂಬರುವ ಬೇಸಿಗೆ ದಿನಗಳಲ್ಲಿ ಸಾರ್ವಜನಿಕ ಆರೋಗ್ಯದ ರಕ್ಷಣೆ ದೊಡ್ಡ ಸವಾಲಾಗಿದೆ. ಆದರೆ, ಬಿಸಿಗಾಳಿಗಳ ಉಲ್ಬಣಗೊಳ್ಳುತ್ತಿರುವ ಪರಿಸ್ಥಿತಿಯನ್ನು ಪರಿಹರಿಸಲು ರಾಜ್ಯವು ಯಾವುದೇ ಕ್ರಿಯಾ ಯೋಜನೆಯನ್ನು ಸಿದ್ಧಪಡಿಸಿಲ್ಲʼ ಎಂದು ನ್ಯಾಯಮೂರ್ತಿ ಅನೂಪ್ ಕುಮಾರ್ ಧಂಡ್ ಹೇಳಿದರು.
ಕಳೆದ ವರ್ಷ ಇದೇ ರೀತಿ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡು ನಿರ್ದೇಶನಗಳನ್ನು ನೀಡಿದ್ದರೂ ರಾಜ್ಯವು ಕಾರ್ಯನಿರ್ವಹಿಸಲು ವಿಫಲವಾಗಿದೆ ಎಂದು ನ್ಯಾಯಾಲಯವು ಹೇಳಿದೆ.