ರಾಜಸ್ಥಾನ: ಗಾಯಗಳನ್ನು ನೋಡಲು ಸಾಮೂಹಿಕ ಅತ್ಯಾಚಾರ ಸಂತ್ರಸ್ತೆಯ ಬಳಿ ಬಟ್ಟೆ ಬಿಚ್ಚುವಂತೆ ಸೂಚಿಸಿದ ನ್ಯಾಯಾಧೀಶ!

Update: 2024-04-04 10:46 GMT

ಜೈಪುರ: ಸಾಮೂಹಿಕ ಅತ್ಯಾಚಾರ ಸಂತ್ರಸ್ತೆಯ ಗಾಯಗಳನ್ನು ನೋಡಲು ಬಟ್ಟೆ ಬಿಚ್ಚುವಂತೆ ಸೂಚಿಸಿದ ಆರೋಪದಲ್ಲಿ ರಾಜಸ್ಥಾನದ ಜುಡಿಷಿಯಲ್ ನ್ಯಾಯಾಧೀಶರೊಬ್ಬರ ವಿರುದ್ಧ ಎಪ್‌ಐಆರ್ ದಾಖಲಿಸಿಕೊಳ್ಳಲಾಗಿದೆ ಎಂದು Bar and Bench ವರದಿ ಮಾಡಿದೆ.

ಸಾಮೂಹಿಕ ಅತ್ಯಾಚಾರ ಪ್ರಕರಣದ ಸಂತ್ರಸ್ತೆಯು ನ್ಯಾಯಾಲಯದೆದುರು ತನ್ನ ಹೇಳಿಕೆಯನ್ನು ದಾಖಲಿಸಲು ಹೋದಾಗ ಈ ಘಟನೆ ನಡೆದಿದೆ ಎಂದು ಎಫ್‌ಐಆರ್‌ನಲ್ಲಿ ಹೇಳಲಾಗಿದೆ.

ಹಿಂದೌನ್ ಸಿಟಿ ಜುಡಿಷಿಯಲ್ ಮ್ಯಾಜಿಸ್ಟ್ರೇಟ್ ರವೀಂದ್ರ ಕುಮಾರ್ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 345 (ಅಕ್ರಮ ಬಂಧನ) ಹಾಗೂ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ದೌರ್ಜನ್ಯ ತಡೆ ಕಾಯ್ದೆಯ ಸೂಕ್ತ ಸೆಕ್ಷನ್‌ಗಳಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Ashfaq

contributor

Byline - ವಾರ್ತಾಭಾರತಿ

contributor

Similar News