ರಾಜಸ್ಥಾನ ವಿಧಾನ ಸಭಾ ಚುನಾವಣೆ: ಶೇ.68 ಮತದಾನ

Update: 2023-11-25 16:29 GMT

Photo: PTI 

ಜೈಪುರ: ರಾಜಸ್ಥಾನ ವಿಧಾನಸಭೆಗೆ ಶನಿವಾರ ನಡೆದ ಚುನಾವಣೆಯಲ್ಲಿ ಶೇ.68ಕ್ಕಿಂತಲೂ ಅಧಿಕ ಮಂದಿ ಮತಚಲಾಯಿಸಿದ್ದಾರೆ. ಕೆಲವೊಂದು ಅಹಿತಕರ ಘಟನೆಗಳನ್ನು ಹೊರತುಪಡಿಸಿದರೆ, ರಾಜ್ಯಾದ್ಯಂತ ಮತದಾನ ಶಾಂತಿಯುತವಾಗಿ ನಡೆದಿದೆ ಎಂದು ಚುನಾವಣಾ ಆಯೋಗದ ಮೂಲಗಳು ತಿಳಿಸಿವೆ.

ರಾಜಸ್ಥಾನ ವಿಧಾನಸಭೆಗೆ ಒಂದೇ ಹಂತದಲ್ಲಿ ಚುನಾವಣೆ ನಡೆದಿದೆ. ರಾಜಸ್ತಾನ ವಿಧಾನಸಭೆಯ 200 ವಿಧಾನಸಭಾ ಕ್ಷೇತ್ರಗಳ ಪೈಕಿ 199 ಕ್ಷೇತ್ರಗಳಿಗೆ ಇಂದು ಮತದಾನವಾಗಿದೆ. ಕಾಂಗ್ರೆಸ್ ಅಭ್ಯರ್ಥಿ ಗುರುಮಿತ್ ಸಿಂಗ್ ಕುನೂರ್ ಅವರ ನಿಧನದ ಹಿನ್ನೆಲೆಯಲ್ಲಿ ಗಂಗಾನಗರ ಜಿಲ್ಲೆಯ ಕರಣ್ಪುರ ವಿಧಾನಸಭಾ ಕ್ಷೇತ್ರದ ಚುನಾವಣೆಯನ್ನು ಮುಂದೂಡಲಾಗಿದೆ.

ಚುನಾವಣೆ ನಡೆದ 199 ಕ್ಷೇತ್ರಗಳಲ್ಲಿ 5,26,90,146 ಮಂದಿ ಮತಚಲಾಯಿಸುವ ಹಕ್ಕು ಹೊಂದಿದ್ದರು.

ಬಹುತೇಕ ಕ್ಷೇತ್ರಗಳಲ್ಲಿ ಆಡಳಿತಾರೂಢ ಕಾಂಗ್ರೆಸ್ ಹಾಗೂ ಪ್ರಮುಖ ಪ್ರತಿಪಕ್ಷ ಬಿಜೆಪಿ ನಡುವೆ ನೇರ ಸ್ಪರ್ಧೆ ಏರ್ಪಟ್ಟಿದೆ. ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್(ಸರ್ದಾರ್ಪುರ), ಮಾಜಿ ಉಪಮುಖ್ಯಮಂತ್ರಿ ಸಚಿನ್ ಪೈಲಟ್ (ಟೊಂಕ್), ಪಿಸಿಸಿ ವರಿಷ್ಠ ಗೋವಿಂದ ಸಿಂಗ್ ದೊಸ್ತಾರಾ (ಲಚ್ಮನ್ಘರ್), ಬಿಜೆಪಿ ನಾಯಕಿ ವಸುಂಧರಾ ರಾಜೆ ಸಿಂಧಿಯಾ (ಜಲ್ರಾಪಠಾಣ್) ಕಣದಲ್ಲಿರುವ ಪ್ರಮುಖರು.

ಡಿಸೆಂಬರ್ 3ರಂದು ಮತ ಏಣಿಕೆ ನಡೆಯಲಿದೆ.

Tags:    

Writer - ವಾರ್ತಾಭಾರತಿ

contributor

Editor - Ismail

contributor

Byline - ವಾರ್ತಾಭಾರತಿ

contributor

Similar News