ರಾಮ ಮಂದಿರ ಪ್ರತಿಷ್ಠಾಪನಾ ಕಾರ್ಯಕ್ರಮ ; ಶರದ್ ಪವಾರ್, ಲಾಲು ಪ್ರಸಾದ್ ಪಾಲ್ಗೊಳ್ಳುವುದಿಲ್ಲ

Update: 2024-01-17 17:12 GMT

 ಲಾಲು ಪ್ರಸಾದ್ ಯಾದವ್,  ಶರದ್ ಪವಾರ್|  ANI  

ಹೊಸದಿಲ್ಲಿ : ಅಯೋಧ್ಯೆ ರಾಮ ಮಂದಿರದಲ್ಲಿ ಜನವರಿ 22ರಂದು ನಡೆಯಲಿರುವ ರಾಮ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮದಲ್ಲಿ ಭಾಗವಹಿಸುವುದಿಲ್ಲ ಎಂದು ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ ಹಾಗೂ ಆರ್ ಜೆ ಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಬುಧವಾರ ಹೇಳಿದ್ದಾರೆ.

ಪವಾರ್ ಅವರು ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರದ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಅವರಿಂದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಆಹ್ವಾನ ಸ್ವೀಕರಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಅವರು, ತಾನು ರಾಮ ಪ್ರಾಣ ಪ್ರತಿಷ್ಠಾಪನೆ ಪೂರ್ಣಗೊಂಡ ಬಳಿಕ ಅಲ್ಲಿಗೆ ಭೇಟಿ ನೀಡಲಿದ್ದೇನೆ ಎಂದಿದ್ದಾರೆ.

ಕಾರ್ಯಕ್ರಮದಲ್ಲಿ ಪಾಲ್ಗೊಳ್ಳದ ಇತರ ಪ್ರಮುಖ ನಾಯಕರೆಂದರೆ ಕಾಂಗ್ರೆಸ್ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ, ಅಧೀರ್ ರಂಜನ್ ಚೌಧುರಿ ಹಾಗೂ ಪಶ್ಚಿಮಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ. ಸಿಪಿಐ (ಎಂ) ಕೂಡಾ ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವುದಿಲ್ಲ ಎಂದು ಹೇಳಿದೆ.

ಉತ್ತರಪ್ರದೇಶದ ಅಯೋಧ್ಯೆಯಲ್ಲಿರುವ ರಾಮ ಮಂದಿರದ ರಾಮ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮವನ್ನು ಬಿಜೆಪಿ ಹಾಗೂ ಆರ್ಎಸ್ಎಸ್ ರಾಜಕೀಯ ಕಾರ್ಯಕ್ರಮವಾಗಿ ಪರಿವರ್ತಿಸಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.

ಮಮತಾ ಬ್ಯಾನರ್ಜಿಅವರು, ತಾನು ಜನವರಿ 22ರಂದು ಮಂದಿರ, ಮಸೀದಿ, ಚರ್ಚ್ ಹಾಗೂ ಗುರುದ್ವಾರವನ್ನು ಒಳಗೊಂಡ ಸರ್ವಧರ್ಮ ರ್ಯಾಲಿಯನ್ನು ನಡೆಸಲಿದ್ದೇನೆ ಎಂದಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Ismail

contributor

Byline - ವಾರ್ತಾಭಾರತಿ

contributor

Similar News