ಅಪ್ರಾಪ್ತೆಯ ಮೇಲೆ ಅತ್ಯಾಚಾರ; ಆರೋಪಿ ಪೊಲೀಸ್ ವಶಕ್ಕೆ

Update: 2023-12-19 09:28 IST
ಅಪ್ರಾಪ್ತೆಯ ಮೇಲೆ ಅತ್ಯಾಚಾರ; ಆರೋಪಿ ಪೊಲೀಸ್ ವಶಕ್ಕೆ

Photo: freepik

  • whatsapp icon

ಭೋಪಾಲ್: ಐದು ವರ್ಷದ ನರ್ಸರಿ ವಿದ್ಯಾರ್ಥಿನಿ ಮೇಲೆ ಶಾಲೆಯ ವ್ಯಾನ್ ಚಾಲಕ ಅತ್ಯಾಚಾರ ಎಸಗಿದ ಪೈಶಾಚಿಕ ಘಟನೆ ಮಧ್ಯಪ್ರದೇಶದ ಸೆಹೋರ್ ನಿಂದ ವರದಿಯಾಗಿದೆ.

ಲೈಂಗಿಕ ಹಲ್ಲೆಯಿಂದ ತೀವ್ರ ಗಾಯಗೊಂಡಿರುವ ಬಾಲಕಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ಆರೋಪಿ ವಿನೋದ್ ಮಹೇಶ್ವರಿ ಎಂಬಾತನನ್ನು ಭಾರತೀಯ ದಂಡಸಂಹಿತೆ ಮತ್ತು ಪೋಕ್ಸೋ ಕಾಯ್ದೆಯ ವಿವಿಧ ಸೆಕ್ಷನ್ ಅನ್ವಯ ಪ್ರಕರಣ ದಾಖಲಿಸಿ ಬಂಧಿಸಲಾಗಿದೆ.

ಡಿಸೆಂಬರ್ 13ರ ಸಂಜೆ ಶಾಲೆಯಿಂದ ಬಾಲಕಿಯನ್ನು ಮನೆಗೆ ಕರೆದೊಯ್ಯುತ್ತಿದ್ದ ವೇಳೆ ಮಹೇಶ್ವರಿ ಆಕೆಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಈ ಕೃತ್ಯ ಎಸಗಿದ್ದ ಎಂದು ಪೊಲೀಸರು ಹೇಳಿದ್ದಾರೆ.

ತೀವ್ರ ಯಾತನೆಯಿಂದ ಬಳಲುತ್ತಿದ್ದ ಬಾಲಕಿ ಮನೆಗೆ ಬಂದು ಘಟನೆಯನ್ನು ಪೋಷಕರಿಗೆ ವಿವರಿಸಿದ್ದಾಳೆ. ಪೋಷಕರು ಆಕೆಯನ್ನು ಆಸ್ಪತ್ರೆಗೆ ದಾಖಲಿಸಿದ್ದು, ವೈದ್ಯರು ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸಂತ್ರಸ್ತ ಬಾಲಕಿಗೆ ತೀವ್ರ ಗಾಯಗಳಾಗಿದ್ದರೂ, ದೇಹಸ್ಥಿತಿ ಸ್ಥಿರವಾಗಿದೆ ಎಂದು ವೈದ್ಯರು ವಿವರಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News