ಆರ್ ಬಿಐ ಗವರ್ನರ್ ಶಕ್ತಿಕಾಂತ ದಾಸ್ ಆಸ್ಪತ್ರೆಗೆ ದಾಖಲು

Update: 2024-11-26 04:46 GMT

Photo | PTI

ಹೊಸದಿಲ್ಲಿ: ಭಾರತೀಯ ರಿಸರ್ವ್ ಬ್ಯಾಂಕ್( ಆರ್ ಬಿಐ) ಗವರ್ನರ್ ಶಕ್ತಿಕಾಂತ ದಾಸ್ ಅವರು ಅನಾರೋಗ್ಯದ ಹಿನ್ನೆಲೆ ಮಂಗಳವಾರ ಚೆನ್ನೈನ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಶಕ್ತಿಕಾಂತ ದಾಸ್ ಅವರು ಅಸಿಡಿಟಿ ಸಂಬಂಧಿತ ಸಮಸ್ಯೆಗಳಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಈ ಕುರಿತು ಆರ್ ಬಿಐ ವಕ್ತಾರರು ಹೇಳಿಕೆಯನ್ನು ಹೊರಡಿಸಿದ್ದು, ಶಕ್ತಿಕಾಂತ ದಾಸ್ ಅವರು ಆರೋಗ್ಯವಾಗಿದ್ದಾರೆ ಮತ್ತು ಮುಂದಿನ 2 ರಿಂದ 3 ಗಂಟೆಗಳ ಒಳಗಡೆ ಡಿಸ್ಚಾರ್ಜ್ ಆಗುತ್ತಾರೆ. ಯಾರು ಕೂಡ ಅವರ ಆರೋಗ್ಯದ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ ಎಂದು ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - siddik

contributor

Byline - ವಾರ್ತಾಭಾರತಿ

contributor

Similar News