ಸತತ 11ನೇ ಬಾರಿಗೆ ಶೇ 6.5 ಯಥಾಸ್ಥಿತಿ ಕಾಯ್ದುಕೊಂಡ ರೆಪೊ ದರ

Update: 2024-12-06 11:30 GMT

ಆರ್ ಬಿಐ ಗವರ್ನರ್ ಶಕ್ತಿಕಾಂತ ದಾಸ್ (PTI)

ಮುಂಬೈ: ಭಾರತೀಯ ರಿಸರ್ವ್ ಬ್ಯಾಂಕ್ ನ ಹಣಕಾಸು ನೀತಿ ಸಮಿತಿ ಸತತ 11ನೇ ಬಾರಿಗೆ ರೆಪೊ ದರವನ್ನು ಶೇ 6.5 ಯಥಾಸ್ಥಿತಿಯಲ್ಲಿಡಲು ನಿರ್ಧರಿಸಿದೆ ಎಂದು ಆರ್ ಬಿಐ ಗವರ್ನರ್ ಶಕ್ತಿಕಾಂತ ದಾಸ್ ಶುಕ್ರವಾರ ತಿಳಿಸಿದ್ದಾರೆ.

ಆರ್ ಬಿಐ ಹಣಕಾಸು ನೀತಿ ಸಮಿತಿ ಸದಸ್ಯರು ಯಥಾಸ್ಥಿತಿ ಕಾಯ್ದುಕೊಳ್ಳಲು 4:2 ಅಂತರದಲ್ಲಿ ಮತ ಚಲಾಯಿಸಿದ್ದಾರೆ. ವಿತ್ತೀಯ ನೀತಿ ಸಮಿತಿಯು (ಎಂಪಿಸಿ) ರೆಪೊ ದರವನ್ನು ಯಥಾಸ್ಥಿತಿಯಲ್ಲಿ ಶೇಕಡಾ 6.5ರಲ್ಲಿ ಇರಿಸಲು ನಿರ್ಧರಿಸಿದೆ ಮತ್ತು ನೀತಿ ನಿಲುವನ್ನು ತಟಸ್ಥವಾಗಿ ಇರಿಸಿದೆ ಎಂದು ಶಕ್ತಿಕಾಂತ ದಾಸ್ ಹೇಳಿದ್ದಾರೆ.

ಫೆಬ್ರವರಿ 2023 ರಿಂದ RBI ರೆಪೋ ದರ 6.5 ಶೇಕಡಾದಲ್ಲೇ ಮುಂದುವರಿದಿದೆ. ಬ್ಯಾಂಕುಗಳಲ್ಲಿ ಹಣದ ಕೊರತೆಯಾದರೆ ಅಥವಾ ಹಣದ ಅವಶ್ಯಕತೆಯಿದ್ದರೆ ಆರ್ ಬಿಐ ಬ್ಯಾಂಕುಗಳಿಗೆ ಕೊಡುವ ಸಾಲದ ಹಣದ ಮೇಲೆ ವಿಧಿಸುವ ನಿಶ್ಚಿತ ಬಡ್ಡಿ ದರ ರೆಪೊ ದರವಾಗಿದೆ. ಹಣದುಬ್ಬರವನ್ನು ನಿಯಂತ್ರಿಸಲು ವಿತ್ತೀಯ ಅಧಿಕಾರಿಗಳು ರೆಪೊ ದರವನ್ನು ಬಳಸುತ್ತಾರೆ.

Tags:    

Writer - ವಾರ್ತಾಭಾರತಿ

contributor

Editor - Irshad Venur

contributor

Byline - ವಾರ್ತಾಭಾರತಿ

contributor

Similar News