ಮಣಿಪುರದ 6 ಮತಗಟ್ಟೆಗಳಲ್ಲಿ ಮಂಗಳವಾರ ಮರು ಮತದಾನಕ್ಕೆ ಆದೇಶ

Update: 2024-04-28 04:52 GMT

Photo: NDtv

ಗುವಾಹಟಿ: ಭಾರತೀಯ ಚುನಾವಣಾ ಆಯೋಗವು ಔಟರ್ ಮಣಿಪುರ ಲೋಕಸಭಾ ಕ್ಷೇತ್ರದ ಆರು ಮತಗಟ್ಟೆಗಳಲ್ಲಿ ಮಂಗಳವಾರ (ಏಪ್ರಿಲ್ 30) ಮರು ಮತದಾನ ನಡೆಯಲಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ಶುಕ್ರವಾರ ಔಟರ್ ಮಣಿಪುರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿರುವ 28 ವಿಧಾನಸಭಾ ಕ್ಷೇತ್ರಗಳ ಪೈಕಿ 13 ಕ್ಷೇತ್ರಗಳ 848 ಮತಗಟ್ಟೆಗಳಲ್ಲಿ ಮತದಾನ ನಡೆಯಿತು. ಏಪ್ರಿಲ್ 19 ರಂದು ಇನ್ನರ್ ಮಣಿಪುರ ಲೋಕಸಭಾ ಕ್ಷೇತ್ರದ 15 ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಮೊದಲ ಹಂತದಲ್ಲಿ ಮತದಾನ ನಡೆದಿತ್ತು.

ಚುನಾವಣಾ ಆಯೋಗದ ಆದೇಶವನ್ನು ಉಲ್ಲೇಖಿಸಿ ಮಣಿಪುರ ಮುಖ್ಯ ಚುನಾವಣಾಧಿಕಾರಿ (ಸಿಇಒ) ಪ್ರದೀಪ್ ಕುಮಾರ್ ಝಾ ಅವರು ಮಂಗಳವಾರ ಈ ಆರು ಮತಗಟ್ಟೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡುವಂತೆ ಮತದಾರರಿಗೆ ಮನವಿ ಮಾಡಿದ್ದಾರೆ.

ಶುಕ್ರವಾರ ಈ ಆರು ಮತಗಟ್ಟೆಗಳಲ್ಲಿ ಗೊಂದಲಗಳುಂಟಾಗಿದ್ದರಿಂದ, ಮಂಗಳವಾರ ಹೊಸದಾಗಿ ಮತದಾನಕ್ಕೆ ಆದೇಶ ನೀಡುವಂತೆ ಚುನಾವಣಾಧಿಕಾರಿಗಳು ತಿಳಿಸಿದ್ದಾರೆ.

ಗುಂಡಿನ ದಾಳಿ, ಬೆದರಿಕೆ, ಇವಿಎಂ ಧ್ವಂಸ ಮತ್ತು ಮತಗಟ್ಟೆ ವಶಪಡಿಸಿಕೊಂಡ ಪ್ರಕರಣಗಳ ನಂತರ ಮೊದಲ ಹಂತದಲ್ಲಿ ಮಣಿಪುರದ ಹನ್ನೊಂದು ಮತಗಟ್ಟೆಗಳಲ್ಲಿ ಮರು ಮತದಾನಕ್ಕೆ ನಡೆದಿದ್ದವು.

Tags:    

Writer - ವಾರ್ತಾಭಾರತಿ

contributor

Editor - Thouheed

contributor

Byline - ವಾರ್ತಾಭಾರತಿ

contributor

Similar News