ಕೋಲ್ಕತ್ತಾ| ಆರನೆಯ ದಿನಕ್ಕೆ ಕಾಲಿಟ್ಟ ಕಿರಿಯ ವೈದ್ಯರ ಆಮರಣಾಂತ ಉಪವಾಸ; ಓರ್ವ ವೈದ್ಯನ ಸ್ಥಿತಿ ಗಂಭೀರ

Update: 2024-10-11 08:45 GMT

Photo: PTI

ಕೋಲ್ಕತ್ತಾ: ಸರಕಾರಿ ಆಸ್ಪತ್ರೆಯಾದ ಆರ್.ಜಿ.ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ನಡೆದಿದ್ದ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ವಿರೋಧಿಸಿ ಕಿರಿಯ ವೈದ್ಯರು ನಡೆಸುತ್ತಿರುವ ಆಮರಣಾಂತ ಉಪವಾಸ ಆರನೆಯ ದಿನಕ್ಕೆ ಕಾಲಿಟ್ಟಿದೆ. ಆಮರಣಾಂತ ಉಪವಾಸದಲ್ಲಿ ಪಾಲ್ಗೊಂಡಿದ್ದ ಓರ್ವ ವೈದ್ಯನ ಆರೋಗ್ಯ ಪರಿಸ್ಥಿತಿ ಗಂಭೀರವಾಗಿದೆ ಎಂದು ಆರೋಗ್ಯಾಧಿಕಾರಿಗಳು ತಿಳಿಸಿದ್ದಾರೆ.

ರವಿವಾರದಿಂದ ಆಮರಣಾಂತ ಉಪವಾಸದಲ್ಲಿ ತೊಡಗಿದ್ದ ಅನಿಕೇತ್ ಮಹತೊ ಎಂಬ ಕಿರಿಯ ವೈದ್ಯರ ಆರೋಗ್ಯ ಸ್ಥಿತಿ ಗುರುವಾರ ರಾತ್ರಿ ವಿಷಮಿಸಿದ್ದರಿಂದ, ಅವರನ್ನು ಆರ್.ಜಿ.ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಐದು ಮಂದಿ ಸದಸ್ಯರ ವೈದ್ಯಕೀಯ ಮಂಡಳಿಯು ಮಹತೊ ಆರೋಗ್ಯ ಸ್ಥಿತಿಯ ಮೇಲೆ ನಿಗಾ ವಹಿಸಿದೆ ಎಂದು ಹೇಳಲಾಗಿದೆ.

ಪ್ರತಿಭಟನಾನಿರತ ವೈದ್ಯರು ಮೃತ ವೈದ್ಯೆಗೆ ನ್ಯಾಯ ದೊರಕಿಸಿಕೊಡಬೇಕು ಹಾಗೂ ಆರ್.ಜಿ.ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಆರೋಗ್ಯ ಕಾರ್ಯದರ್ಶಿ ಎನ್.ಎಸ್.ನಿಗಮ್ ಅವರನ್ನು ತಕ್ಷಣವೇ ಹುದ್ದೆಯಿಂದ ವಜಾಗೊಳಿಸಬೇಕು ಎಂದು ಆಗ್ರಹಿಸುತ್ತಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Irshad Venur

contributor

Byline - ವಾರ್ತಾಭಾರತಿ

contributor

Similar News