ಪಾಕ್ ಪ್ರಧಾನಿ ಶಹಬಾಝ್ ಷರೀಫ್ ಅವರನ್ನು ಭೇಟಿ ಮಾಡಿದ ಎಸ್ ಜೈಶಂಕರ್
Update: 2024-10-16 06:04 GMT
ಇಸ್ಲಾಮಾಬಾದ್ : ಭಾರತದ ವಿದೇಶಾಂಗ ಸಚಿವ ಎಸ್ ಜೈಶಂಕರ್ ಮತ್ತು ಪಾಕಿಸ್ತಾನದ ಪ್ರಧಾನಿ ಶಹಬಾಝ್ ಷರೀಫ್ ಮಂಗಳವಾರ ಇಸ್ಲಾಮಾಬಾದ್‌ನಲ್ಲಿ ಭೇಟಿಯಾದರು.
ಷರೀಫ್ ಅವರು ಆಯೋಜಿಸಿದ್ದ ಅನೌಪಚಾರಿಕ ಔತಣಕೂಟದಲ್ಲಿ ಇಬ್ಬರೂ ಹಸ್ತಲಾಘವ ಮಾಡಿ ಶುಭಾಶಯ ವಿನಿಮಯ ಮಾಡಿಕೊಂಡರು. ಜೈಶಂಕರ್ ಅವರು ಶಾಂಘೈ ಕೋ-ಆಪರೇಷನ್ ಆರ್ಗನೈಸೇಶನ್ (SCO) ಸರ್ಕಾರದ ಮುಖ್ಯಸ್ಥರ ಮಂಡಳಿಯ (CHG) 23 ನೇ ಸಭೆಯಲ್ಲಿ ಭಾಗವಹಿಸಲು ಇಸ್ಲಾಮಾಬಾದ್‌ನಲ್ಲಿದ್ದಾರೆ.
ಗಡಿಯಾಚೆಗಿನ ಭಯೋತ್ಪಾದನೆಗೆ ಸಂಬಂಧಿಸಿದಂತೆ ಭಾರತ ಪಾಕಿಸ್ತಾನದ ನಡುವಿನ ರಾಜತಾಂತ್ರಿಕ ಸಂಬಂಧಗಳು ಉದ್ವಿಗ್ನವಾಗಿದೆ. ಸುಮಾರು ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಭಾರತೀಯ ವಿದೇಶಾಂಗ ಸಚಿವರು ಪಾಕಿಸ್ತಾನಕ್ಕೆ ಭೇಟಿ ನೀಡಿದ್ದಾರೆ. ಪಾಕಿಸ್ತಾನಕ್ಕೆ ಭೇಟಿ ನೀಡಿದ ಕೊನೆಯ ಭಾರತೀಯ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್.