ಆರ್‌ಬಿಐ 26ನೇ ಗವರ್ನರ್ ಆಗಿ ಸಂಜಯ್ ಮಲ್ಹೋತ್ರಾ ಅಧಿಕಾರ ಸ್ವೀಕಾರ
Update: 2024-12-11 08:31 GMT
ಮುಂಬೈ: ಬುಧವಾರ ಭಾರತೀಯ ರಿಸರ್ವ್ ಬ್ಯಾಂಕ್ ನ 26ನೇ ಗವರ್ನರ್ ಆಗಿ ಸಂಜಯ್ ಮಲ್ಹೋತ್ರಾ ಅಧಿಕಾರ ಸ್ವೀಕರಿಸಿದರು.
ಡಿಸೆಂಬರ್ 11, 2024ರಿಂದ ಮುಂದಿನ ಮೂರು ವರ್ಷಗಳ ಕಾಲ ಅವರು ಭಾರತೀಯ ರಿಸರ್ವ್ ಬ್ಯಾಂಕ್ ನ ಗವರ್ನರ್ ಆಗಿರಲಿದ್ದಾರೆ ಎಂದು ಭಾರತೀಯ ರಿಸರ್ವ್ ಬ್ಯಾಂಕ್ ನ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ತಮ್ಮ ಆರು ವರ್ಷಗಳ ಅವಧಿಯನ್ನು ಪೂರೈಸಿ, ಮಂಗಳವಾರ ಅಧಿಕಾರದಿಂದ ನಿರ್ಗಮಿಸಿದ ಶಕ್ತಿಕಾಂತ್ ದಾಸ್ ಬದಲಿಗೆ ಮಾಜಿ ಕಂದಾಯ ಕಾರ್ಯದರ್ಶಿ ಸಂಜಯ್ ಮಲ್ಹೋತ್ರಾ ಗವರ್ನರ್ ಆಗಿ ನೇಮಕಗೊಂಡಿದ್ದಾರೆ.