ಮೋದಿ ಸರಕಾರವು ಎರಡು ವರ್ಷ ಇರುವುದೂ ಸಂಶಯ : ಸಂಜಯ ರಾವುತ್
ಮುಂಬೈ : ಪ್ರಧಾನಿ ನರೇಂದ್ರ ಮೋದಿ ಸರಕಾರವು ತನ್ನ ಅಧಿಕಾರಾವಧಿಯನ್ನು ಪೂರ್ಣಗೊಳಿಸುವುದು ಬಿಡಿ, ಅದು 2026ರವರೆಗೆ ಎರಡು ವರ್ಷಗಳ ಕಾಲವಾದರೂ ಅಸ್ತಿತ್ವದಲ್ಲಿರುವುದರ ಬಗ್ಗೆ ತನಗೆ ಸಂಶಯವಿದೆ ಎಂದು ಗುರುವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತ ಹೇಳಿದ ಶಿವಸೇನೆ (ಯುಬಿಟಿ) ನಾಯಕ ಸಂಜಯ ರಾವುತ್ ಅವರು, ಮೋದಿ ಸರಕಾರವು ತನ್ನ ಅಧಿಕಾರಾವಧಿಯನ್ನು ಪೂರ್ಣಗೊಳಿಸಲು ವಿಫಲಗೊಂಡರೆ ಅದು ಮಹಾರಾಷ್ಟ್ರ ಮತ್ತು ಇತರ ರಾಜ್ಯಗಳಲ್ಲಿ ರಾಜಕೀಯ ಬದಲಾವಣೆಗಳಿಗೆ ಕಾರಣವಾಗಲಿದೆ ಎಂದು ಪ್ರತಿಪಾದಿಸಿದರು.
ನವಂಬರ್ 2024ರ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಕಳಪೆ ಸಾಧನೆಯ ಹಿನ್ನೆಲೆಯಲ್ಲಿ ಶಿವಸೇನೆ(ಯುಬಿಟಿ)ಯ ಕೆಲವು ನಾಯಕರು ಪಕ್ಷವನ್ನು ತೊರೆಯಬಹುದು ಎಂಬ ಊಹಾಪೋಹಗಳನ್ನು ತಳ್ಳಿಹಾಕಿದ ರಾವುತ್,ಪಕ್ಷದ ಹಿರಿಯ ನಾಯಕರು ಅವರೊಂದಿಗೆ ಮಾತನಾಡಿದ್ದಾರೆ,ಅವರು ಸ್ಥಳೀಯ ಸಮಸ್ಯೆಗಳ ಬಗ್ಗೆ ಅಸಮಾಧಾನವನ್ನು ತೋಡಿಕೊಂಡಿದ್ದರಷ್ಟೇ ಎಂದರು.
ಮಾಜಿ ರಾಜಾಪುರ ಶಾಸಕ ರಾಜನ್ ಸಾಳ್ವಿಯವರು ಉದ್ಧವ ಠಾಕ್ರೆ ನೇತೃತ್ವದ ಶಿವಸೇನೆಯನ್ನು ತೊರೆಯಬಹುದು ಎಂಬ ವದಂತಿಗಳ ಕುರಿತು ಸುದ್ದಿಗಾರರು ಪ್ರಶ್ನಿಸಿದ್ದರು.