ಜಮ್ಮು ಮತ್ತು ಕಾಶ್ಮೀರ ಬಿಜೆಪಿಯ ನೂತನ ರಾಜ್ಯಾಧ್ಯಕ್ಷರಾಗಿ ಸತ್ ಶರ್ಮ ನೇಮಕ

Update: 2024-11-03 12:26 GMT

ಸತ್ ಶರ್ಮ | PC ; X \ @CrossTownNews

ಶ್ರೀನಗರ: ಮಹತ್ವದ ಬೆಳವಣಿಗೆಯೊಂದರಲ್ಲಿ ರವಿವಾರ ಜಮ್ಮು ಮತ್ತು ಕಾಶ್ಮೀರ ಘಟಕದ ಬಿಜೆಪಿ ಅಧ್ಯಕ್ಷರನ್ನಾಗಿ ಸತ್ ಶರ್ಮರನ್ನು ನೇಮಕ ಮಾಡಲಾಗಿದೆ. ಇತ್ತೀಚೆಗೆ ಈ ಪ್ರಾಂತ್ಯದಲ್ಲಿ ಮುಕ್ತಾಯಗೊಂಡ ಚುನಾವಣಾ ಫಲಿತಾಂಶದ ಹಿನ್ನೆಲೆಯಲ್ಲಿ ಈ ಬದಲಾವಣೆ ಮಾಡಲಾಗಿದೆ ಎನ್ನಲಾಗಿದೆ. 2018ರಿಂದ ಜಮ್ಮು ಮತ್ತು ಕಾಶ್ಮೀರ ಬಿಜೆಪಿ ಘಟಕದ ಅಧ್ಯಕ್ಷರಾಗಿದ್ದ ರವೀಂದರ್ ರೈನಾರಿಂದ ಅವರು ಅಧಿಕಾರ ಸ್ವೀಕರಿಸಲಿದ್ದಾರೆ.

ಈ ಕುರಿತು ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಅಧಿಕೃತ ನೋಟಿಸ್ ಜಾರಿಗೊಳಿಸಿದ್ದು, ಬಿಜೆಪಿ ಮುಖ್ಯಸ್ಥ ಜೆ.ಪಿ.ನಡ್ಡಾರ ಆದೇಶದ ಮೇರೆಗೆ ಈ ನೇಮಕಾತಿ ತಕ್ಷಣದಿಂದಲೇ ಜಾರಿಗೆ ಬರಲಿದೆ ಎಂದು ಹೇಳಲಾಗಿದೆ.

ಇದಕ್ಕೂ ಮುನ್ನ, ಸತ್ ಶರ್ಮರನ್ನು ಜಮ್ಮು ಮತ್ತು ಕಾಶ್ಮೀರ ಬಿಜೆಪಿ ಘಟಕದ ಕಾರ್ಯಾಧ್ಯಕ್ಷರನ್ನಾಗಿ ನೇಮಿಸಲಾಗಿತ್ತು.

Tags:    

Writer - ವಾರ್ತಾಭಾರತಿ

contributor

Editor - Ismail

contributor

Byline - ವಾರ್ತಾಭಾರತಿ

contributor

Similar News