ಸಾವರ್ಕರ್ ಮಾನಹಾನಿ ಪ್ರಕರಣ | ಸಮನ್ಸ್ ರದ್ದುಗೊಳಿಸುವಂತೆ ಕೋರಿ ರಾಹುಲ್ ಗಾಂಧಿ ಸಲ್ಲಿಸಿದ ಅರ್ಜಿ ತಿರಸ್ಕರಿಸಿದ ಅಲಹಾಬಾದ್ ಹೈಕೋರ್ಟ್
Update: 2025-04-05 21:22 IST

ರಾಹುಲ್ ಗಾಂಧಿ | PC : PTI
ಅಲಹಾಬಾದ್: ಹಿಂದುತ್ವವಾದಿ ವಿ.ಡಿ. ಸಾವರ್ಕರ್ ಮಾನಹಾನಿ ಪ್ರಕರಣದಲ್ಲಿ ತನಗೆ ನೀಡಿದ ಸಮನ್ಸ್ ಅನ್ನು ರದ್ದುಗೊಳಿಸುವಂತೆ ಕೋರಿ ರಾಹುಲ್ ಗಾಂಧಿ ಸಲ್ಲಿಸಿದ ಅರ್ಜಿಯನ್ನು ಅಲಹಾಬಾದ್ ಉಚ್ಚ ನ್ಯಾಯಾಲಯ ತಿರಸ್ಕರಿಸಿದೆ.
ವಕೀಲ ನೃಪೇಂದ್ರ ಪಾಂಡೆ ನೀಡಿದ ದೂರಿನ ಆಧಾರದಲ್ಲಿ ರಾಹುಲ್ ಗಾಂಧಿ ವಿರುದ್ಧ ಮಾನಹಾನಿ ಪ್ರಕರಣ ದಾಖಲಿಸಲಾಗಿದೆ. 2002ರಲ್ಲಿ ನಡೆದ ಭಾರತ್ ಜೋಡೊ ಯಾತ್ರೆಯ ಸಂದರ್ಭ ರಾಹುಲ್ ಗಾಂದಿ ಅವರು ಸಾವರ್ಕರ್ ಅವರನ್ನು ಅವಮಾನಿಸಿದ್ದಾರೆ ಎಂದು ಅವರು ದೂರಿನಲ್ಲಿ ಆರೋಪಿಸಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿ ಲಕ್ನೋದ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ರಾಹುಲ್ ಗಾಂಧಿ ಅವರಿಗೆ ಡಿಸೆಂಬರ್‌ನಲ್ಲಿ ಸಮನ್ಸ್ ನೀಡಿತ್ತು. ಈ ಆದೇಶವನ್ನು ಪ್ರಶ್ನಿಸಿ ರಾಹುಲ್ ಗಾಂಧಿ ಅಲಹಾಬಾದ್ ಉಚ್ಚ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.