ಆಸ್ಕರ್ಗೆ ಅಧಿಕೃತ ಪ್ರವೇಶ ಪಡೆದ ‘ಸಾವರ್ಕರ್’ ಚಿತ್ರ
ಹೊಸದಿಲ್ಲಿ : ಬಾಲಿವುಡ್ ನಟ ರಣದೀಪ್ ಹೂಡಾ ನಟಿಸಿ, ನಿರ್ದೇಶಿಸಿರುವ ‘ಸಾವರ್ಕರ್’ ಚಿತ್ರ 2025ನೇ ಸಾಲಿನ ಆಸ್ಕರ್ ಪ್ರಶಸ್ತಿಗೆ ಅಧಿಕೃತ ಪ್ರವೇಶ ಪಡೆದಿದೆ. ಇದರೊಂದಿಗೆ ‘ಲಾಪತಾ ಲೇಡೀಸ್’ ಚಿತ್ರದ ನಂತರ ಮತ್ತೊಂದು ಚಿತ್ರವು ಆಸ್ಕರ್ ಗೆ ಪ್ರವೇಶ ಗಿಟ್ಟಿಸಿಕೊಂಡಿದೆ.
ಇನ್ಸ್ಟಾಗ್ರಾಂನಲ್ಲಿ ಈ ಬಗ್ಗೆ ಪೋಸ್ಟ್ ಹಂಚಿಕೊಂಡಿರುವ ಚಿತ್ರತಂಡ, “ನಮ್ಮ ಸಿನಿಮಾ ಆಸ್ಕರ್ ಪ್ರಶಸ್ತಿಗೆ ಅಧಿಕೃತ ಪ್ರವೇಶ ಪಡೆದಿದೆ. ಚಿತ್ರವನ್ನು ಗುರುತಿಸಿ ಆಯ್ಕೆ ಮಾಡಿದ್ದಕ್ಕಾಗಿ ಫಿಲ್ಮ್ ಫೆಡರೇಷನ್ ಗೆ ಧನ್ಯವಾದಗಳು. ಇದೊಂದು ರೋಮಾಂಚನಕಾರಿ ಪ್ರಯಾಣವಾಗಿದ್ದು, ಈ ಪ್ರಯಾಣದಲ್ಲಿ ಸಹಕರಿಸಿದ ಎಲ್ಲರಿಗೂ ಧನ್ಯವಾದಗಳು’ ಎಂದ ತಿಳಿಸಿದೆ.
ನಟ ರಣದೀಪ್ ಹೂಡಾ ನಿರ್ದೇಶನದ ಚೊಚ್ಚಲ ಚಿತ್ರ ಇದಾಗಿದ್ದು, ಚಿತ್ರದಲ್ಲಿ ನಟಿ ಅಂಕಿತಾ ಲೋಖಂಡೆ ಮತ್ತು ಅಮಿತ್ ಸಿಯಾಲ್ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಚಿತ್ರವು 2024 ರ ಮಾರ್ಚ್ 22ರಂದು ಹಿಂದಿ ಹಾಗೂ ಮರಾಠಿ ಭಾಷೆಗಳಲ್ಲಿ ಬಿಡುಗಡೆಯಾಗಿತ್ತು.