ಮರಗಳನ್ನು ಕಡಿಯಲು ಅನುಮತಿಸಿದ ದಿಲ್ಲಿ ಲೆಫ್ಟಿನೆಂಟ್ ಗವರ್ನರ್ ಸಕ್ಸೇನಾಗೆ ಸುಪ್ರೀಂ ಕೋರ್ಟ್ ತರಾಟೆ

Update: 2024-07-13 08:16 GMT

ದಿಲ್ಲಿಯ ಲೆಫ್ಟಿನೆಂಟ್ ಗವರ್ನರ್ ವಿ.ಕೆ.ಸಕ್ಸೇನಾ (Photo: equitypandit.com)

ಹೊಸದಿಲ್ಲಿ: ದಿಲ್ಲಿಯ ಲೆಫ್ಟಿನೆಂಟ್ ಗವರ್ನರ್ ವಿ.ಕೆ.ಸಕ್ಸೇನಾ ಅವರು ಅನುಮತಿ ನೀಡಿದ ಹಿನ್ನೆಲೆಯಲ್ಲಿ ಸಂರಕ್ಷಿತ ದಿಲ್ಲಿ ರಿಡ್ಜ್ ಪ್ರದೇಶದಲ್ಲಿ 420 ಮರಗಳಿಗೆ ಕೊಡಲಿಯೇಟು ಹಾಕಿರುವುದು ಗಮನಕ್ಕೆ ಬಂದಿದೆ ಎಂದು ಸುಪ್ರೀಂಕೋರ್ಟ್ ಶುಕ್ರವಾರ ಹೇಳಿದೆ.

ದಿಲ್ಲಿ ಅಭಿವೃದ್ಧಿ ಪ್ರಾಧಿಕಾರ ಅಥವಾ ದಿಲ್ಲಿ ಮುಖ್ಯ ಕಾರ್ಯದರ್ಶಿಯವರು ಲೆಫ್ಟಿನೆಂಟ್ ಜನರಲ್ ಅವರಿಗೆ ಅನುಮತಿ ನೀಡುವ ಮುನ್ನ ಸುಪ್ರೀಂಕೋರ್ಟ್‍ನ ಅನುಮತಿ ಪಡೆಯುವುದು ಅಗತ್ಯ ಎಂದು ಮನವರಿಕೆ ಮಾಡಬೇಕು ಎಂದು ನ್ಯಾಯಮೂರ್ತಿ ಎ.ಎಸ್.ಓಕಾ ನೇತೃತ್ವದ ವಿಶೇಷ ಪೀಠ ಅಭಿಪ್ರಾಯಪಟ್ಟಿದೆ.

ನೀವು ಸುಪ್ರೀಂಕೋರ್ಟ್‍ನ ಕಾರ್ಯವನ್ನು ಮಾಡುವಂತಿಲ್ಲ ಎಂದು ಗಂಭೀರ ಎಚ್ಚರಿಕೆ ನೀಡಿದೆ.

Tags:    

Writer - ವಾರ್ತಾಭಾರತಿ

contributor

Editor - Irshad Venur

contributor

Byline - ವಾರ್ತಾಭಾರತಿ

contributor

Similar News