ಉದ್ಯೋಗಕ್ಕಾಗಿ ಭೂಮಿ ಹಗರಣ ; ದಿಲ್ಲಿ ನ್ಯಾಯಾಲಯದಿಂದ ಲಾಲು, ತೇಜಸ್ವಿ ಇತರರಿಗೆ ಸಮನ್ಸ್

Update: 2023-09-22 16:51 GMT

ಲಾಲುಪ್ರಸಾದ್ ಯಾದವ್, ತೇಜಸ್ವಿ ಯಾದವ್| Photo: PTI  

ಹೊಸದಿಲ್ಲಿ : ದಿಲ್ಲಿಯ ನ್ಯಾಯಾಲಯವೊಂದು ಉದ್ಯೋಗಕ್ಕಾಗಿ ಭೂಮಿ ಹಗರಣಕ್ಕೆ ಸಂಬಂಧಿಸಿದಂತೆ ಬಿಹಾರದ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್, ಮಾಜಿ ಕೇಂದ್ರ ರೈಲ್ವೆ ಸಚಿವ ಲಾಲುಪ್ರಸಾದ್ ಯಾದವ್, ಮಾಜಿ ಮುಖ್ಯಮಂತ್ರಿ ರಾಬ್ಡಿ ದೇವಿ ಮತ್ತು ಇತರ 14 ಆರೋಪಿಗಳಿಗೆ ಶುಕ್ರವಾರ ಸಮನ್ಸ್ ಗಳನ್ನು ಹೊರಡಿಸಿದೆ.

ವಿಶೇಷ ನ್ಯಾಯಾಧೀಶರಾದ ಗೀತಾಂಜಲಿ ಗೋಯೆಲ್ ಅವರು ಜು.3ರಂದು ಸಿಬಿಐ ಸಲ್ಲಿಸಿದ್ದ ಹೊಸ ದೋಷಾರೋಪ ಪಟ್ಟಿಯನ್ನು ಗಮನದಲ್ಲಿಟ್ಟುಕೊಂಡು ಅ.4ರಂದು ತನ್ನ ಮುಂದೆ ಹಾಜರಾಗುವಂತೆ ಆರೋಪಿಗಳಿಗೆ ಸಮನ್ಸ್ ಹೊರಡಿಸಲು ಆದೇಶಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದರು.

ಹಗರಣವು ಲಾಲುಪ್ರಸಾದ್ ಯುಪಿಎ ಸರಕಾರದಲ್ಲಿ ರೈಲ್ವೆ ಸಚಿವರಾಗಿದ್ದ ಅವಧಿಗೆ ಸಂಬಂಧಿಸಿದೆ.

2004 ಮತ್ತು 2009ರ ನಡುವೆ ಭಾರತೀಯ ರೈಲ್ವೆಯ ವಿವಿಧ ವಲಯಗಳಲ್ಲಿ ಹಲವಾರು ಜನರನ್ನು ಗ್ರೂಪ್ ಡಿ ಹುದ್ದೆಗಳಿಗೆ ನೇಮಕ ಮಾಡಲಾಗಿತ್ತು ಮತ್ತು ಇದಕ್ಕೆ ಪ್ರತಿಯಾಗಿ ಅವರು ತಮ್ಮ ಭೂಮಿಯನ್ನು ಲಾಲುಪ್ರಸಾದ್ ಕುಟುಂಬದ ಸದಸ್ಯರಿಗೆ ವರ್ಗಾಯಿಸಿದ್ದರು ಎಂದು ಸಿಬಿಐ ಆರೋಪಿಸಿದೆ.

Tags:    

Writer - ವಾರ್ತಾಭಾರತಿ

contributor

Editor - Ismail

contributor

Byline - ವಾರ್ತಾಭಾರತಿ

contributor

Similar News