ಪಿಎಸಿ ಸಭೆಗೆ ಎರಡನೇ ಬಾರಿಯೂ ಗೈರಾದ ಸೆಬಿ ಮುಖ್ಯಸ್ಥೆ ಮಾಧಬಿ ಪುರಿ ಬುಚ್

Update: 2024-10-24 11:30 GMT

Photo : indiatoday.in

ಹೊಸದಿಲ್ಲಿ : ಸೆಬಿ ಮುಖ್ಯಸ್ಥೆ ಮಾಧಬಿ ಪುರಿ ಬುಚ್ ಗುರುವಾರ ಸಾರ್ವಜನಿಕ ಲೆಕ್ಕಪತ್ರ ಸಮಿತಿ (ಪಿಎಸಿ) ಸಭೆಗೆ ಗೈರಾಗಿದ್ದಾರೆ. ಸಭೆಗೆ ಹಾಜರಾಗುವಂತೆ ಪಿಎಸಿ ಅವರಿಗೆ ಸಮನ್ಸ್ ನೀಡಿದ್ದರೂ ಅವರು ಗೈರಾಗಿರುವುದು ಇದು ಎರಡನೇ ಬಾರಿಯಾಗಿದೆ.

ಹಿರಿಯ ಕಾಂಗ್ರೆಸ್ ನಾಯಕ ಕೆಸಿ ವೇಣುಗೋಪಾಲ್ ನೇತೃತ್ವದ ಸಂಸತ್ತಿನ ಸಾರ್ವಜನಿಕ ಲೆಕ್ಕಪತ್ರ ಸಮಿತಿಯು ಸೆಬಿ ಮತ್ತು ಅದರ ಕಾರ್ಯಚಟುವಟಿಕೆಗಳ ಪರಿಶೀಲನೆ, ಐಸಿಐಸಿಐನಲ್ಲಿ ಲಾಭದಾಯಕ ಹುದ್ದೆಯಲ್ಲಿ ಮುಂದುವರಿಕೆ ಕುರಿತ ಆರೋಪದ ಬಗ್ಗೆ ವಿವರಣೆ ನೀಡುವಂತೆ ಸೆಬಿ ಮುಖ್ಯಸ್ಥೆ ಮಾಧಬಿ ಪುರಿ ಬುಚ್ ಗೆ ಸಮನ್ಸ್ ನೀಡಿತ್ತು.

ಪಿಎಸಿ ಸಭೆ ಕುರಿತು ನಾವು ಈ ಮೊದಲು ಸಂಬಂಧಪಟ್ಟವರಿಗೆ ನೋಟಿಸ್ ಕಳುಹಿಸಿದ್ದೇವೆ. ಅವರು ಸಭೆಯಿಂದ ವಿನಾಯಿತಿ ಕೋರಿದ್ದರು, ಆದರೆ, ಅದನ್ನು ನಾವು ನಿರಾಕರಿಸಿದ್ದೆವು. ಆ ಬಳಿಕ ಸಮಿತಿಯ ಮುಂದೆ ಹಾಜರಾಗುವುದಾಗಿ ಅವರು ಹೇಳಿದ್ದರು. ಆದರೆ, ತುರ್ತು ಕಾರಣಗಳಿಂದ ಸಭೆಗೆ ಬರಲು ಸಾಧ್ಯವಾಗುವುದಿಲ್ಲ ಎಂದು ಗುರುವಾರ ಬೆಳಿಗ್ಗೆ 9.30ಕ್ಕೆ ಸೆಬಿ ಮುಖ್ಯಸ್ಥರು ಮತ್ತು ಇತರ ಸದಸ್ಯರು ನಮಗೆ ಮಾಹಿತಿ ನೀಡಿದ್ದಾರೆ. ಹೀಗಾಗಿ ಅವರ ಮನವಿಯನ್ನು ಪರಿಗಣಿಸಿ ಸಭೆಯನ್ನು ಮುಂದೂಡಲು ನಿರ್ಧರಿಸಿದ್ದೇವೆ ಎಂದು ವೇಣುಗೋಪಾಲ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Irshad Venur

contributor

Byline - ವಾರ್ತಾಭಾರತಿ

contributor

Similar News