ದೇಶದ್ರೋಹ ಕಾನೂನು ಸಂಪೂರ್ಣ ರದ್ದುಪಡಿಸಲಾಗುವುದು: ಸಂಸತ್ತಿಗೆ ತಿಳಿಸಿದ ಅಮಿತ್ ಶಾ

Update: 2023-08-11 08:58 GMT

ಹೊಸದಿಲ್ಲಿ: ದೇಶದ್ರೋಹ ಕಾನೂನನ್ನು ಸಂಪೂರ್ಣವಾಗಿ ರದ್ದುಗೊಳಿಸಲಾಗುವುದು. ಹೊಸ ನಿಬಂಧನೆಗಳಲ್ಲಿ ಶಿಕ್ಷೆಯನ್ನು ಹೆಚ್ಚಿಸಲಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇಂದು ಸಂಸತ್ತಿನಲ್ಲಿ ಕ್ರಿಮಿನಲ್ ನ್ಯಾಯ ವ್ಯವಸ್ಥೆಯನ್ನು ಕೂಲಂಕಷವಾಗಿ ಪರಿಶೀಲಿಸುವ ಉದ್ದೇಶ ಹೊಂದಿರುವ ಮೂರು ಮಸೂದೆಗಳ ಮಂಡನೆ ವೇಳೆ ಹೇಳಿದ್ದಾರೆ.

ಪ್ರಸ್ತುತ, ದೇಶದ್ರೋಹಕ್ಕೆ ಜೀವಾವಧಿ ಶಿಕ್ಷೆ ಅಥವಾ ಮೂರು ವರ್ಷಗಳವರೆಗೆ ವಿಸ್ತರಿಸಬಹುದಾದ ಜೈಲು ಶಿಕ್ಷೆಯನ್ನು ನೀಡಲಾಗುತ್ತದೆ. ಹೊಸ ನಿಬಂಧನೆಯು ಮೂರು ವರ್ಷಗಳ ಜೈಲು ಶಿಕ್ಷೆಯನ್ನು 7 ವರ್ಷಕ್ಕೆ ಹೆಚ್ಚಿಸಲಿದೆ.

"ಪ್ರತಿಯೊಬ್ಬರಿಗೂ ಮಾತನಾಡುವ ಹಕ್ಕಿದೆ. ನಾವು ದೇಶದ್ರೋಹವನ್ನು ಸಂಪೂರ್ಣವಾಗಿ ರದ್ದುಗೊಳಿಸುತ್ತಿದ್ದೇವೆ" ಎಂದು ಗೃಹ ಸಚಿವರು ಸಂಸತ್ತಿನಲ್ಲಿ ಹೇಳಿದರು.

ಹೊಸ ಮಸೂದೆಯಲ್ಲಿ 'ದೇಶದ್ರೋಹ' ಎಂಬ ಪದವನ್ನು ತೆಗೆದುಹಾಕಲಾಗಿದೆ ಮತ್ತು ಕೆಲವು ಬದಲಾವಣೆಗಳೊಂದಿಗೆ ಸೆಕ್ಷನ್ 150 ರ ಅಡಿಯಲ್ಲಿ ನಿಬಂಧನೆಯನ್ನು ಉಳಿಸಿಕೊಳ್ಳಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Sathish

contributor

Byline - ವಾರ್ತಾಭಾರತಿ

contributor

Similar News