"ಮುಸ್ಲಿಮ್ ಸಮುದಾಯದ ಹಿತಾಸಕ್ತಿಗಳಿಗೆ ಗಂಭೀರ ಹಾನಿ": ವಕ್ಫ್ ಮಸೂದೆ ಹಿಂದೆಗೆದುಕೊಳ್ಳಲು ಪ್ರಧಾನಿ ಮೋದಿಗೆ ಸ್ಟಾಲಿನ್ ಪತ್ರ
Update: 2025-04-02 20:06 IST

ಎಂ.ಕೆ.ಸ್ಟಾಲಿನ್ | PC :PTI
ಚೆನ್ನೈ: ಬುಧವಾರ ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರವನ್ನು ಬರೆದಿರುವ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರು ವಕ್ಫ್(ತಿದ್ದುಪಡಿ) ಮಸೂದೆ,2024ನ್ನು ಹಿಂದೆಗೆದುಕೊಳ್ಳುವಂತೆ ಆಗ್ರಹಿಸಿದ್ದಾರೆ.
ಸಂವಿಧಾನವು ಪ್ರತಿಯೊಬ್ಬ ಪ್ರಜೆಗೂ ತಮ್ಮ ಧರ್ಮಗಳನ್ನು ಅನುಸರಿಸುವ ಹಕ್ಕನ್ನು ನೀಡಿದೆ ಹಾಗೂ ಈ ಹಕ್ಕನ್ನು ಎತ್ತಿಹಿಡಿಯುವುದು ಮತ್ತು ರಕ್ಷಿಸುವುದು ಚುನಾಯಿತ ಸರಕಾರಗಳ ಕರ್ತವ್ಯವಾಗಿದೆ. ಆದರೆ 1995ರ ವಕ್ಫ್ ಕಾಯ್ದೆಗೆ ಪ್ರಸ್ತಾವಿತ ತಿದ್ದುಪಡಿಗಳು ಅಲ್ಪಸಂಖ್ಯಾತರಿಗೆ ನೀಡಲಾಗಿರುವ ಸಾಂವಿಧಾನಿಕ ರಕ್ಷಣೆಯನ್ನು ಪರಿಗಣನೆಗೆ ತೆಗೆದುಕೊಂಡಿಲ್ಲ ಮತ್ತು ಮುಸ್ಲಿಮ್ ಸಮುದಾಯದ ಹಿತಾಸಕ್ತಿಗಳಿಗೆ ಗಂಭೀರ ಹಾನಿಯನ್ನುಂಟು ಮಾಡಲಿವೆ ಎಂದು ಸ್ಟಾಲಿನ್ ಹೇಳಿದ್ದಾರೆ.
ತಮಿಳುನಾಡು ವಿಧಾನಸಭೆಯು ಹಲವು ದಿನಗಳ ಹಿಂದೆಯೇ ಮಸೂದೆಯನ್ನು ಹಿಂದೆಗೆದುಕೊಳ್ಳುವಂತೆ ಕೇಂದ್ರವನ್ನು ಆಗ್ರಹಿಸಿ ನಿರ್ಣಯವನ್ನು ಅಂಗೀಕರಿಸಿದೆ.