ಲೈಂಗಿಕ ಕಿರುಕುಳ ಪ್ರಕರಣ | ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ದೋಷಾರೋಪ ರೂಪಿಸಿದ ದಿಲ್ಲಿ ನ್ಯಾಯಾಲಯ

Update: 2024-05-21 15:07 GMT

ಬ್ರಿಜ್ ಭೂಷಣ್ ಶರಣ್ ಸಿಂಗ್ | PC : PTI 

ಹೊಸದಿಲ್ಲಿ: ಮಹಿಳಾ ಕುಸ್ತಿಪಟುಗಳು ಸಲ್ಲಿಸಿದ ಕ್ರಿಮಿನಲ್ ಪ್ರಕರಣದಲ್ಲಿ ದಿಲ್ಲಿ ನ್ಯಾಯಾಲಯ ಮಂಗಳವಾರ ಭಾರತದ ಕುಸ್ತಿ ಫೆಡರೇಶನ್ (WFI)ನ ಮಾಜಿ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಲೈಂಗಿಕ ಕಿರುಕುಳ, ಬೆದರಿಕೆ ಹಾಗೂ ಮಹಿಳೆಯ ಗೌರವಕ್ಕೆ ಧಕ್ಕೆ ದೋಷಾರೋಪಗಳನ್ನು ರೂಪಿಸಿದೆ.

ಬ್ರಿಜ್ ಭೂಷಣ್ ಶರಣ್ ಸಿಂಗ್ ತಾನು ನಿರಪರಾಧಿ ಎಂದು ಹೆಚ್ಚುವರಿ ಮುಖ್ಯ ಮೆಟ್ರೊಪಾಲಿಟಿನ್ ಮ್ಯಾಜಿಸ್ಟ್ರೇಟ್ (ACMM) ಪ್ರಿಯಾಂಕಾ ರಜಪೂತ್ ಅವರಲ್ಲಿ ಹೇಳಿದರು.

ಪ್ರಕರಣದಲ್ಲಿ ಸಹ ಆರೋಪಿಯಾಗಿರುವ ಭಾರತ ಕುಸ್ತಿ ಫೆಡರೇಶನ್ ಮಾಜಿ ಸಹಾಯಕ ಕಾರ್ಯದರ್ಶಿ ವಿನೋದ್ ತೋಮರ್ ಅವರ ವಿರುದ್ಧ ಕ್ರಿಮಿನಲ್ ಬೆದರಿಕೆಯ ದೋಷಾರೋಪವನ್ನು ನ್ಯಾಯಾಲಯ ರೂಪಿಸಿದೆ.

ಲೈಂಗಿಕ ಕಿರುಕುಳದ ಆರೋಪ ಕೇಳಿ ಬಂದ ಬಳಿಕ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಉತ್ತರಪ್ರದೇಶದ ಕೈಸರ್ಗಂಜ್ನ ಮಾಜಿ ಬಿಜೆಪಿ ಸಂಸದರಾಗಿರುವ ಸಿಂಗ್ ಗೆ ಬಿಜೆಪಿ ಟಿಕೆಟ್ ನಿರಾಕರಿಸಿತ್ತು. ಅವರಿಗೆ ಬದಲಾಗಿ ಅವರ ಪುತ್ರ ಕರಣ್ ಭೂಷಣ್ ಸಿಂಗ್ ಅವರಿಗೆ ಅದೇ ಕ್ಷೇತ್ರದಲ್ಲಿ ಸ್ಪರ್ಧಿಸಲು ಟಿಕೆಟ್ ನೀಡಿತ್ತು. 

Tags:    

Writer - ವಾರ್ತಾಭಾರತಿ

contributor

Editor - Ismail

contributor

Byline - ವಾರ್ತಾಭಾರತಿ

contributor

Similar News