ರಾಮ ಮಂದಿರ ಉದ್ಘಾಟನೆಗೆ ನನ್ನನ್ನು ಆಹ್ವಾನಿಸಿಲ್ಲ: ಶರದ್ ಪವಾರ್
ಮುಂಬೈ: ಮುಂದಿನ ತಿಂಗಳು ನಡೆಯಲಿರುವ ರಾಮ ಮಂದಿರ ಉದ್ಘಾಟನೆಗೆ ನನಗೆ ಆಹ್ವಾನ ನೀಡಲಾಗಿಲ್ಲ ಎಂದು ಬುಧವಾರ ಹೇಳಿರುವ NCP ವರಿಷ್ಠ ಶರದ್ ಪವಾರ್, ಈ ವಿಷಯವನ್ನು ಬಿಜೆಪಿಯೇನಾದರೂ ರಾಜಕೀಯ ಅಥವಾ ವಾಣಿಜ್ಯ ಲಾಭಕ್ಕಾಗಿ ಬಳಸಿಕೊಳ್ಳುತ್ತಿದೆಯೆ ಎಂಬುದನ್ನು ಅರ್ಥ ಮಾಡಿಕೊಳ್ಳುವುದು ಕಷ್ಟಕರವಾಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ ಎಂದು PTI ಸುದ್ದಿ ಸಂಸ್ಥೆ ವರದಿ ಮಾಡಿದೆ.
ಜನವರಿ 22, 2024ರಂದು ರಾಮ ಮಂದಿರ ಉದ್ಘಾಟನೆ ನಡೆಯಲಿದ್ದು, ಈ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ಉತ್ತರ ಪ್ರದೇಶ ಮುಖ್ಯಮಂತ್ರಿ ಆದಿತ್ಯ ನಾಥ್ ಸೇರಿದಂತೆ 6,000ಕ್ಕೂ ಹೆಚ್ಚು ಗಣ್ಯರು ಭಾಗವಹಿಸುವ ನಿರೀಕ್ಷೆ ಇದೆ. ಈ ಸಂದರ್ಭದಲ್ಲಿ ರಾಮ್ ಲಲ್ಲಾ ವಿಗ್ರಹವನ್ನು ಗರ್ಭಗುಡಿಯಲ್ಲಿ ಪ್ರತಿಷ್ಠಾಪಿಸಲಾಗುತ್ತದೆ.
“ಬಿಜೆಪಿಯೇನಾದರೂ ಈ ವಿಷಯವನ್ನು ರಾಜಕೀಯ ಅಥವಾ ವಾಣಿಜ್ಯ ಉದ್ದೇಶಕ್ಕಾಗಿ ಬಳಸಿಕೊಳ್ಳಲಿದೆಯೆ ಎಂಬುದು ತಿಳಿದಿಲ್ಲ. ಆದರೆ, ಹಲವಾರು ಜನರ ಕೊಡುಗೆಯ ಕಾರಣಕ್ಕೆ ರಾಮ ಮಂದಿರ ನಿರ್ಮಾಣವಾಗಿರುವುದರಿಂದ ನಮಗೆ ಸಂತೋಷವಾಗಿದೆ” ಎಂದು ಪವಾರ್ ಸುದ್ದಿಗಾರರಿಗೆ ತಿಳಿಸಿದ್ದಾರೆ.