ಜಾತಿ ರಾಜಕಾರಣದ ಹೆಸರಿನಲ್ಲಿ ಕೆಲವರು ಶಾಂತಿ ಕದಡಲು ಯತ್ನಿಸುತ್ತಿದ್ದಾರೆ : ಪ್ರಧಾನಿ ಮೋದಿ

Update: 2025-01-04 09:17 GMT

ನರೇಂದ್ರ ಮೋದಿ | PC : PTI 

ಹೊಸದಿಲ್ಲಿ: ಜಾತಿ ರಾಜಕಾರಣದ ಹೆಸರಿನಲ್ಲಿ ಕೆಲವರು ಶಾಂತಿ ಕದಡಲು ಯತ್ನಿಸುತ್ತಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದು, ದೇಶದ ಗ್ರಾಮೀಣ ಭಾಗಗಳಲ್ಲಿ ಸಾಮಾಜಿಕ ಸಾಮರಸ್ಯವನ್ನು ಕಾಪಾಡಲು ಇಂತಹ ಯೋಜನೆಗಳನ್ನು ವಿಫಲಗೊಳಿಸಬೇಕು ಎಂದು ಹೇಳಿದ್ದಾರೆ.

ಗ್ರಾಮೀಣ ಭಾರತ ಮಹೋತ್ಸವವನ್ನು ಉದ್ಘಾಟಿಸಿ ಮಾತನಾಡಿದ ಪ್ರಧಾನಿ ಮೋದಿ, ಜಾತಿ ರಾಜಕಾರಣದ ವಿಷವನ್ನು ಹರಡುವ ಮೂಲಕ ಕೆಲವು ಜನರು ಶಾಂತಿ ಕದಡಲು ಪ್ರಯತ್ನಿಸುತ್ತಿದ್ದಾರೆ ಎಂದು ಯಾವುದೇ ಹೆಸರನ್ನು ಉಲ್ಲೇಖಿಸದೆ ಮೋದಿ ಹೇಳಿದ್ದು, ಗ್ರಾಮಗಳ ಶಾಂತಿ ಸೌಹಾರ್ದತೆಯ ಪರಂಪರೆಯನ್ನು ಬಲಪಡಿಸುವ ಕೆಲಸ ಮಾಡಬೇಕು ಎಂದು ಹೇಳಿದ್ದಾರೆ.

2047ರ ವೇಳೆಗೆ ʼವಿಕಸಿತ್ ಭಾರತ್‌ʼ ಕನಸನ್ನು ಸಹಕಾರಗೊಳಿಸುವಲ್ಲಿ ಗ್ರಾಮಗಳು ಪ್ರಮುಖ ಪಾತ್ರ ವಹಿಸಲಿವೆ. ಹಿಂದಿನ ಸರ್ಕಾರವು ಗ್ರಾಮೀಣ ಭಾರತದಲ್ಲಿ ವಾಸಿಸುವ ಜನರನ್ನು ನಿರ್ಲಕ್ಷಿಸಿತ್ತು, ಸ್ವಾತಂತ್ರ್ಯ ಬಂದು ದಶಕಗಳು ಕಳೆದರೂ ಗ್ರಾಮಗಳು ಮೂಲಭೂತ ಅವಶ್ಯಕತೆಗಳಿಂದ ವಂಚಿತವಾಗಿವೆ. ಆದರೆ ನಮ್ಮ ಸರ್ಕಾರವು ಗ್ರಾಮಗಳನ್ನು ಸಶಕ್ತಗೊಳಿಸುತ್ತಿದೆ ಎಂದು ಪ್ರಧಾನಿ ಹೇಳಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Ismail

contributor

Byline - ವಾರ್ತಾಭಾರತಿ

contributor

Similar News