ದುರ್ಗಾಪುರ ಹೆದ್ದಾರಿಯಲ್ಲಿ ಸೌರವ್ ಗಂಗುಲಿ ಕಾರು ಅಪಘಾತ, ಅಪಾಯದಿಂದ ಪಾರು

Update: 2025-02-21 08:00 IST
ದುರ್ಗಾಪುರ ಹೆದ್ದಾರಿಯಲ್ಲಿ ಸೌರವ್ ಗಂಗುಲಿ ಕಾರು ಅಪಘಾತ, ಅಪಾಯದಿಂದ ಪಾರು

PC: PTI

  • whatsapp icon

ಕೋಲ್ಕತಾ: ಪಶ್ಚಿಮ ಬಂಗಾಳದ ದುರ್ಗಾಪುರ ಎಕ್ಸ್‌ಪ್ರೆಸ್‌ವೇಯಲ್ಲಿ ಗುರುವಾರ ಸಂಭವಿಸಿದ ಅಪಘಾತದಲ್ಲಿ ಭಾರತೀಯ ಕ್ರಿಕೆಟಿಗ ಸೌರವ್ ಗಂಗುಲಿ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರಾಗಿದ್ದಾರೆ.

ಭಾರತೀಯ ಕ್ರಿಕೆಟ್ ತಂಡದ ಮಾಜಿ ನಾಯಕರಾಗಿರುವ ಗಂಗುಲಿ, ಬರ್ದ್ವಾನ್‌ನಲ್ಲಿ ನಡೆದ ವಿಶ್ವವಿದ್ಯಾಲಯದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಹೋಗುತ್ತಿದ್ದಾಗ ಈ ಘಟನೆ ನಡೆದಿದೆ ಎನ್ನಲಾಗಿದೆ. ಅವರ ಕಾರು ಲಾರಿಗೆ ಡಿಕ್ಕಿ ಹೊಡೆದಿದೆ. ಅದೃಷ್ಟವಶಾತ್, ಗಂಗುಲಿ ಅವರು ಯಾವುದೇ ಗಂಭೀರ ಗಾಯಗಳಿಲ್ಲದೆ ಪಾರಾಗಿದ್ದಾರೆ.

ವರದಿಗಳ ಪ್ರಕಾರ, ಬುರ್ದ್ವಾನ್ ವಿಶ್ವವಿದ್ಯಾಲಯದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಗಂಗುಲಿ ಕಾರಿನಲ್ಲಿ ತೆರಳುತ್ತಿದ್ದರು. ಅವರ ಕಾರಿನ ಎದುರಿದ್ದ ಲಾರಿ ಚಾಲಕ ಇದ್ದಕ್ಕಿದ್ದಂತೆ ಬ್ರೇಕ್ ಹಾಕಿದ್ದಾನೆ. ತಕ್ಷಣವೇ ಗಂಗುಲಿ ಅವರು ಪ್ರಯಾಣಿಸುತ್ತಿದ್ದ ಕಾರಿನ ಚಾಲಕ ಬ್ರೇಕ್ ಹಾಕುತ್ತಿದ್ದಾನೆ. ಅಪಘಾತವನ್ನು ತಪ್ಪಿಸಲು, ಗಂಗುಲಿ ಬೆಂಗಾವಲಿನಲ್ಲಿದ್ದ ಎರಡು ಕಾರುಗಳು ಪರಸ್ಪರ ಡಿಕ್ಕಿ ಹೊಡೆದಿವೆ. ದುರ್ಗಾಪುರ ಎಕ್ಸ್‌ಪ್ರೆಸ್‌ವೇಯ ದಾದುಪುರ ಬಳಿ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

15 ರಿಂದ 20 ನಿಮಿಷಗಳ ನಿಲುಗಡೆಯ ನಂತರ, ಗಂಗುಲಿ ಕಾರ್ಯಕ್ರಮಕ್ಕೆ ತೆರಳಿದ್ದಾರೆ ಎಂದು ತಿಳಿದು ಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News