ಪರವಾನಿಗೆ ಅಮಾನತಾಗಿರುವ 14 ಉತ್ಪನ್ನಗಳ ಮಾರಾಟ ಸ್ಥಗಿತ: ಸುಪ್ರೀಂಕೋರ್ಟ್‌ಗೆ ತಿಳಿಸಿದ ಪತಂಜಲಿ

Update: 2024-07-09 10:21 GMT

ಯೋಗಗುರು ರಾಮ್‌ದೇವ್‌ (PTI)

ಹೊಸದಿಲ್ಲಿ: ಎಪ್ರಿಲ್ ತಿಂಗಳಲ್ಲಿ ಉತ್ತರಾಖಂಡ ರಾಜ್ಯ ಪರವಾನಿಗೆ ಪ್ರಾಧಿಕಾರ ಅಮಾನತುಗೊಳಿಸಿದ್ದ 14 ಉತ್ಪನ್ನಗಳ ಮಾರಾಟವನ್ನು ಸ್ಥಗಿತಗೊಳಿಸಲಾಗಿದೆ ಎಂದು ಮಂಗಳವಾರ ಪತಂಜಲಿ ಆಯುರ್ವೇದ್ ಲಿಮಿಟೆಡ್‌ ಸುಪ್ರೀಂಕೋರ್ಟ್‌ಗೆ ತಿಳಿಸಿದೆ.

ಪತಂಜಲಿಯ 5,606 ಮಾರಾಟ ಮಳಿಗೆಗಳಿಗೆ ಈ ಉತ್ಪನ್ನಗಳನ್ನು ಮಾರಾಟದಿಂದ ಹಿಂಪಡೆಯುವಂತೆ ಸೂಚಿಸಲಾಗಿದೆ ಎಂದು ನ್ಯಾ. ಹಿಮಾ ಕೊಹ್ಲಿ ಹಾಗೂ ನ್ಯಾ. ಸಂದೀಪ್ ಮೆಹ್ತಾರನ್ನು ಒಳಗೊಂಡಿದ್ದ ನ್ಯಾಯ ಪೀಠಕ್ಕೆ ಪತಂಜಲಿ ಸಂಸ್ಥೆ ತಿಳಿಸಿದೆ.

ಈ 14 ಉತ್ಪನ್ನಗಳ ಯಾವುದೇ ಸ್ವರೂಪದ ಜಾಹೀರಾತುಗಳನ್ನು ಹಿಂಪಡೆಯುವಂತೆ ಮಾಧ್ಯಮ ವೇದಿಕೆಗಳಿಗೂ ನಿರ್ದೇಶನ ನೀಡಲಾಗಿದೆ ಎಂದೂ ಅದು ಮಾಹಿತಿ ನೀಡಿದೆ.

ಒಂದು ವೇಳೆ ಈ 14 ಉತ್ಪನ್ನಗಳ ಜಾಹೀರಾತುಗಳನ್ನು ತೆಗೆದು ಹಾಕುವಂತೆ ಸಾಮಾಜಿಕ ಮಾಧ್ಯಮ ಮಧ್ಯವರ್ತಿ ಸಂಸ್ಥೆಗಳಿಗೆ ಮಾಡಿರುವ ಮನವಿಯನ್ನು ಅವು ಪುರಸ್ಕರಿಸಿವೆಯೆ ಹಾಗೂ ಅವು ಈ 14 ಉತ್ಪನ್ನಗಳ ಜಾಹೀರಾತುಗಳನ್ನು ಹಿಂಪಡೆದಿವೆಯೆ ಎಂಬ ಕುರಿತು ಎರಡು ವಾರಗಳೊಳಗೆ ಪ್ರಮಾಣ ಪತ್ರ ಸಲ್ಲಿಸುವಂತೆ ಪತಂಜಲಿ ಆಯುರ್ವೇದ್ ಲಿಮಿಟೆಡ್‌ಗೆ ಸೂಚಿಸಿದ ನ್ಯಾಯಪೀಠ, ವಿಚಾರಣೆಯನ್ನು ಜುಲೈ 30ಕ್ಕೆ ಮುಂದೂಡಿತು.

Tags:    

Writer - ವಾರ್ತಾಭಾರತಿ

contributor

Editor - Irshad Venur

contributor

Byline - ವಾರ್ತಾಭಾರತಿ

contributor

Similar News