ತಿರುಪತಿ ಲಡ್ಡು ವಿವಾದ: ಸುಪ್ರೀಂಕೋರ್ಟ್ ಮೆಟ್ಟಿಲೇರಿದ ಸುಬ್ರಮಣಿಯನ್ ಸ್ವಾಮಿ
Update: 2024-09-23 07:05 GMT
ಹೊಸದಿಲ್ಲಿ: ತಿರುಪತಿ ಲಡ್ಡಿಗೆ ಪ್ರಾಣಿಗಳ ಕೊಬ್ಬನ್ನು ಬಳಸಲಾಗಿದೆ ಎಂಬ ಆರೋಪಗಳ ಕುರಿತು ಪರಿಶೀಲನೆ ನಡೆಸಲು ಸುಪ್ರೀಂಕೋರ್ಟ್ ಮೇಲ್ವಿಚಾರಣೆಯಲ್ಲಿ ಸ್ವತಂತ್ರ ಸಮಿತಿಯನ್ನು ರಚಿಸುವಂತೆ ಕೋರಿ ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾರೆ.
ಈ ಹಿಂದಿನ ಸರಕಾರ ಅವಧಿಯಲ್ಲಿ ತಿರುಪತಿ ದೇವಸ್ಥಾನದಲ್ಲಿ ಪ್ರಸಾದವಾಗಿ ನೀಡುತ್ತಿದ್ದ ಲಡ್ಡಿಗೆ ಪ್ರಾಣಿಗಳ ಕೊಬ್ಬುಗಳನ್ನು ಬಳಸಲಾಗುತ್ತಿತ್ತು ಎಂದು ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಆರೋಪಿಸಿದ್ದರು. ಇದು ಆಂಧ್ರದ ಮಾಜಿ ಸಿಎಂ ಜಗನ್ ಮೋಹನ್ ರೆಡ್ಡಿ ಮತ್ತು ಹಾಲಿ ಸಿಎಂ ಚಂದ್ರ ಬಾಬು ನಾಯ್ಡು ನಡುವೆ ಜಟಾಪಟಿಗೆ ಕಾರಣವಾಗಿತ್ತು.
ಲಡ್ಡುಗಳನ್ನು ತಯಾರಿಸಲು ಪ್ರಾಣಿಗಳ ಕೊಬ್ಬನ್ನು ಬಳಸುತ್ತಾರೆ ಎಂಬ ಆರೋಪಗಳ ಬಗ್ಗೆ ಪರಿಶೀಲಿಸಲು ಸುಪ್ರೀಂಕೋರ್ಟ್ ಮೇಲ್ವಿಚಾರಣೆಯಲ್ಲಿ ಸ್ವತಂತ್ರ ಸಮಿತಿಯನ್ನು ರಚಿಸುವಂತೆ ಕೋರಿ ಸುಬ್ರಮಣಿಯನ್ ಸ್ವಾಮಿ ಪಿಐಎಲ್ ಸಲ್ಲಿಸಿದ್ದಾರೆ.