ದೇಶದಾದ್ಯಂತ ಅಕ್ರಮ ಬುಲ್ಡೋಝರ್ ಕಾರ್ಯಾಚರಣೆಗೆ ನೀಡಿದ್ದ ತಡೆಯಾಜ್ಞೆ ವಿಸ್ತರಿಸಿದ ಸುಪ್ರೀಂ ಕೋರ್ಟ್

Update: 2024-10-01 11:50 GMT

Photo : ANI

ಹೊಸದಿಲ್ಲಿ : ರಾಜ್ಯಗಳಲ್ಲಿ ಕ್ರಿಮಿನಲ್ ಆರೋಪಿಗಳು ಸೇರಿದಂತೆ ನಾಗರಿಕರ ಆಸ್ತಿಗಳನ್ನು ಬುಲ್ಡೋಝರ್ ಬಳಸಿ ಅಕ್ರಮವಾಗಿ ನೆಲಸಮ ಮಾಡಲಾಗುತ್ತಿದೆ ಎಂದು ಆರೋಪಿಸಿ ಸಲ್ಲಿಸಿದ ಅರ್ಜಿಗಳನ್ನು ಮಂಗಳವಾರ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ತನ್ನ ತೀರ್ಪನ್ನು ಕಾಯ್ದಿರಿಸಿದೆ. ಅಕ್ರಮ ಬುಲ್ಡೋಝರ್ ಕಾರ್ಯಾಚರಣೆಗೆ ಈ ಹಿಂದೆ ನೀಡಿದ್ದ ತಡೆಯಾಜ್ಞೆಯನ್ನು ಪೀಠವು ವಿಸ್ತರಿಸಿದೆ.

ಬುಲ್ಡೋಝರ್ ಬಳಸಿ ಅಕ್ರಮವಾಗಿ ಆಸ್ತಿಗಳನ್ನು ಧ್ವಂಸಗೊಳಿಸುವ ವಿಚಾರವಾಗಿ ದೇಶದಾದ್ಯಂತ ಅನ್ವಯವಾಗುವಂತೆ ಮಾರ್ಗಸೂಚಿಗಳನ್ನು ರೂಪಿಸುವುದಾಗಿ ಸುಪ್ರೀಂ ಕೋರ್ಟ್ ಹೇಳಿದೆ. ಒಬ್ಬ ವ್ಯಕ್ತಿ ಆರೋಪಿ ಅಥವಾ ಅಪರಾಧಿ ಎಂಬುದಷ್ಟೇ ಆಸ್ತಿ ಧ್ವಂಸ ಮಾಡಲು ಕಾರಣವಾಗುವುದಿಲ್ಲ ಎಂದು ನ್ಯಾಯಾಲಯವು ಉಲ್ಲೇಖಿಸಿದೆ.

ಒಂದು ನಿರ್ಧಿಷ್ಟ ಧರ್ಮಕ್ಕೆ ಮಾತ್ರ ಸೀಮಿತವಾಗುವಂತೆ ವಿಭಿನ್ನ ಕಾನೂನು ಇರಬಾರದು. ಹಾಗಂತ ಸಾರ್ವಜನಿಕ ರಸ್ತೆಗಳು, ಸರ್ಕಾರಿ ಭೂಮಿ ಅಥವಾ ಅರಣ್ಯಗಳಲ್ಲಿ ಯಾವುದೇ ಅನಧಿಕೃತ ನಿರ್ಮಾಣಗಳನ್ನು ರಕ್ಷಿಸುವ ಪ್ರಶ್ನೆಯೇ ಇಲ್ಲ. ಸಾರ್ವಜನಿಕ ಸ್ಥಳಗಳನ್ನು ಅತಿಕ್ರಮಿಸಿಕೊಂಡವರಿಗೆ ನಮ್ಮ ಆದೇಶದಿಂದ ರಕ್ಷಣೆ ಸಿಗುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

Full View

Tags:    

Writer - ವಾರ್ತಾಭಾರತಿ

contributor

Editor - Irshad Venur

contributor

Byline - ವಾರ್ತಾಭಾರತಿ

contributor

Similar News