ಎಂಸಿಡಿ ಸ್ಥಾಯಿ ಸಮಿತಿ ಚುನಾವಣೆ | ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಆಪ್

Update: 2024-09-29 15:03 GMT

ಸುಪ್ರೀಂ ಕೋರ್ಟ್ | PTI

ಹೊಸದಿಲ್ಲಿ : ದಿಲ್ಲಿ ಮಹಾನಗರ ಪಾಲಿಕೆ (ಎಂಸಿಡಿ)ಯ ಸ್ಥಾಯಿ ಸಮಿತಿ ಸದಸ್ಯರ ಚುನಾವಣೆ ನಡೆಸಿರುವುದನ್ನು ಪ್ರಶ್ನಿಸಿ ಆಮ್ ಆದ್ಮಿ ಪಕ್ಷ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ.

ದಿಲ್ಲಿ ಮುಖ್ಯಮಂತ್ರಿ ಆತಿಶಿ ಅವರು ಬಿಜೆಪಿ ‘‘ಪ್ರಜಾಪ್ರಭುತ್ವವನ್ನು ಕೊಲ್ಲುತ್ತಿದೆ’’ ಎಂದು ಆರೋಪಿಸಿದ ಹಾಗೂ ಚುನಾವಣೆ ‘‘ಅಕ್ರಮ ಹಾಗೂ ಅಸಾಂವಿಧಾನಿಕ’’ ಎಂದು ಪ್ರತಿಪಾದಿಸಿದ ಬಳಿಕ ಈ ಬೆಳವಣಿಗೆ ನಡೆದಿದೆ.

ಆಡಳಿತಾರೂಢ ಆಮ್ ಆದ್ಮಿ ಪಕ್ಷದ ಕೌನ್ಸಿಲರ್‌ಗಳು ಮತದಾನದಿಂದ ದೂರ ಉಳಿದಿರುವುದರಿಂದ ದಿಲ್ಲಿ ಮಹಾನಗರ ಪಾಲಿಕೆಯ 18 ಸದಸ್ಯರ ಸ್ಥಾಯಿ ಸಮಿತಿಯ ಕೊನೆಯ ಖಾಲಿ ಸ್ಥಾನದಲ್ಲಿ ಬಿಜೆಪಿ ಅವಿರೋಧವಾಗಿ ಜಯ ಗಳಿಸಿತು.

ದಿಲ್ಲಿ ಮಹಾನಗರ ಪಾಲಿಕೆಯ ಸ್ಥಾಯಿ ಸಮಿತಿಯಲ್ಲಿರುವ ಖಾಲಿ ಸ್ಥಾನಕ್ಕೆ ಚುನಾವಣೆ ನಡೆಸುವ ಕುರಿತಂತೆ ದಿಲ್ಲಿ ಮೇಯರ್ ಶೇಲ್ಲಿ ಒಬೆರಾಯಿ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕ್ರಿಯ ಆರಂಭಿಸುವಂತೆ ಸಲ್ಲಿಸಿದ ತನ್ನ ಅರ್ಜಿಯ ತುರ್ತು ವಿಚಾರಣೆ ನಡೆಸುವಂತೆ ಕೋರಿ ಬಿಜೆಪಿ ಇತ್ತೀಚೆಗೆ ಸುಪ್ರೀಂ ಕೋರ್ಟ್‌ನ ಮೆಟ್ಟಿಲೇರಿತ್ತು.

ಶನಿವಾರ ಪತ್ರಿಕಾ ಗೋಷ್ಠಿಯಲ್ಲಿ ಆತಿಶಿ, ಈ ಚುನಾವಣೆಯ ವಿರುದ್ಧ ಆಮ್ ಆದ್ಮಿ ಪಕ್ಷ ಸುಪ್ರೀಂ ಕೋರ್ಟ್‌ನ ಮೆಟ್ಟಿಲೇರಲಿದೆ ಎಂದು ಹೇಳಿದ್ದರು.

Tags:    

Writer - ವಾರ್ತಾಭಾರತಿ

contributor

Editor - Ismail

contributor

Byline - ವಾರ್ತಾಭಾರತಿ

contributor

Similar News