ಚುನಾವಣಾ ಬಾಂಡ್‌ಗಳನ್ನು ರದ್ದು | ತೀರ್ಪಿನ ಮರುಪರಿಶೀಲನಾ ಅರ್ಜಿಯನ್ನು ತಿರಸ್ಕರಿಸಿದ ಸುಪ್ರೀಂ ಕೋರ್ಟ್
Update: 2024-10-05 13:25 GMT
ಹೊಸದಿಲ್ಲಿ : ಚುನಾವಣಾ ಬಾಂಡ್‌ಗಳ ಯೋಜನೆಯನ್ನು ರದ್ದುಪಡಿಸಿದ ಫೆಬ್ರವರಿ 15 ರ ತೀರ್ಪನ್ನು ಪ್ರಶ್ನಿಸುವ ಮರುಪರಿಶೀಲನಾ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ.
ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಡಿವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ, ಬಿಆರ್ ಗವಾಯಿ, ಜೆಬಿ ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರಿದ್ದ ಪೀಠವು, ವಕೀಲ ಮ್ಯಾಥ್ಯೂಸ್ ಜೆ ನೆಡುಂಪಾರ ಅವರು ಸಲ್ಲಿಸಿದ್ದ ಮರುಪರಿಶೀಲನಾ ಅರ್ಜಿಯನ್ನು ವಜಾಗೊಳಿಸಿದೆ.
ಫೆಬ್ರವರಿ 15 ರಂದು ಸುಪ್ರೀಂ ಕೋರ್ಟ್ ಚುನಾವಣಾ ಬಾಂಡ್ ಯೋಜನೆಯನ್ನು ಸರ್ವಾನುಮತದಿಂದ ರದ್ದುಗೊಳಿಸಿತ್ತು.