ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ಸಿಂಗ್ ವಿರುದ್ಧದ ವಿಚಾರಣೆಗೆ ನೀಡಿದ್ದ ತಡೆಯಾಜ್ಞೆಯನ್ನು ತೆರವುಗೊಳಿಸಿದ ಸುಪ್ರೀಂ ಕೋರ್ಟ್
ಹೊಸದಿಲ್ಲಿ: ಅತ್ಯಾಚಾರ ಆರೋಪಿ, ಸ್ವಯಂಘೋಷಿತ ದೇವಮಾನವ ಮತ್ತು ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ಸಿಂಗ್ ವಿರುದ್ಧದ ಸಿಖ್ಖರ ಪವಿತ್ರ ಗ್ರಂಥ ಅಪವಿತ್ರ ಪ್ರಕರಣದ ವಿಚಾರಣೆಗೆ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ವಿಧಿಸಿದ್ದ ತಡೆಯಾಜ್ಞೆಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ತೆರವುಗೊಳಿಸಿದೆ.
2015ರಲ್ಲಿ ಬಾರ್ಗರಿಯಲ್ಲಿ ಸಿಖ್ಖರ ಪವಿತ್ರ ಗ್ರಂಥ ಅಪವಿತ್ರಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿತ್ತು.
ಸಿಖ್ಖರ ಪವಿತ್ರ ಗ್ರಂಥವಾದ ಗುರು ಗ್ರಂಥ ಸಾಹಿಬ್ ಅನ್ನು ಅಪವಿತ್ರಗೊಳಿಸಿದ ಮೂರು ಪ್ರಕರಣಗಳಲ್ಲಿ ಗುರ್ಮೀತ್ ಸಿಂಗ್ ಪ್ರಾಸಿಕ್ಯೂಷನ್ ವಿಚಾರಣೆಗೆ ತಡೆ ನೀಡಿದ್ದ ಹೈಕೋರ್ಟ್ ನೀಡದ್ದ ತಡೆಯನ್ನು ಸುಪ್ರೀಂಕೋರ್ಟ್ ಕೋರ್ಟ್ ತೆಗೆದುಹಾಕಿದೆ.
ನ್ಯಾಯಮೂರ್ತಿಗಳಾದ ಬಿ.ಆರ್. ಗವಾಯಿ ಮತ್ತು ಕೆವಿ ವಿಶ್ವನಾಥನ್ ಅವರನ್ನೊಳಗೊಂಡ ಸುಪ್ರೀಂ ಕೋರ್ಟ್ ಪೀಠವು ಗುರ್ಮೀತ್ ಸಿಂಗ್ ಗೆ ನೋಟಿಸ್ ಜಾರಿ ಮಾಡಿದ್ದು, ನಾಲ್ಕು ವಾರಗಳಲ್ಲಿ ಪ್ರತಿಕ್ರಿಯೆ ನೀಡುವಂತೆ ಸೂಚಿಸಿದೆ