ದಿಲ್ಲಿ ಹೈಕೋರ್ಟ್ ಜಡ್ಜ್ ನಿವಾಸದಲ್ಲಿ ಅಪಾರ ಪ್ರಮಾಣದ ನಗದು ಪತ್ತೆ: ಆಂತರಿಕ ತನಿಖೆ ಪ್ರಾರಂಭಿಸಿದ ಸುಪ್ರೀಂ ಕೋರ್ಟ್; ವರದಿ

Update: 2025-03-21 14:46 IST
ದಿಲ್ಲಿ ಹೈಕೋರ್ಟ್ ಜಡ್ಜ್ ನಿವಾಸದಲ್ಲಿ ಅಪಾರ ಪ್ರಮಾಣದ ನಗದು ಪತ್ತೆ: ಆಂತರಿಕ ತನಿಖೆ ಪ್ರಾರಂಭಿಸಿದ ಸುಪ್ರೀಂ ಕೋರ್ಟ್; ವರದಿ

Photo credit: PTI

  • whatsapp icon

ಹೊಸದಿಲ್ಲಿ : ದಿಲ್ಲಿ ಹೈಕೋರ್ಟ್ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರ ನಿವಾಸದಲ್ಲಿ ಅಪಾರ ನಗದು ಪತ್ತೆಯಾದ ಬಗ್ಗೆ ಸುಪ್ರೀಂ ಕೋರ್ಟ್ ಆಂತರಿಕ ತನಿಖೆಯನ್ನು ಪ್ರಾರಂಭಿಸಿದೆ ಎಂದು Bar & Bench ವರದಿ ಮಾಡಿದೆ.

ಇದಲ್ಲದೆ, ಸುಪ್ರೀಂ ಕೋರ್ಟ್ ಈ ಕುರಿತು ದಿಲ್ಲಿ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ದೇವೇಂದ್ರ ಕುಮಾರ್ ಉಪಾಧ್ಯಾಯ ಅವರಿಂದಲೂ ವರದಿ ಕೇಳಿದೆ.

ನ್ಯಾಯಮೂರ್ತಿ ಯಶವಂತ್ ವರ್ಮಾ ಅವರ ನಿವಾಸದಲ್ಲಿ ಸಂಭವಿಸಿದ ಅಗ್ನಿ ಆಕಸ್ಮಿಕದ ವೇಳೆ ಅಪಾರ ಪ್ರಮಾಣದ ನೋಟಿನ ಕಂತೆಗಳು ಪತ್ತೆಯಾಗಿರುವ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಭಾರತದ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ನೇತೃತ್ವದ ಸುಪ್ರೀಂ ಕೋರ್ಟ್ ಕೊಲಿಜಿಯಂ ತುರ್ತು ಸಭೆ ನಡೆಸಿ ದಿಲ್ಲಿ ಹೈಕೋರ್ಟ್ ನ್ಯಾಯಾಧೀಶರಾದ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರನ್ನು ಅಲಹಾಬಾದ್ ಹೈಕೋರ್ಟ್‌ಗೆ ವರ್ಗಾಯಿಸಿದೆ.

ಯಶವಂತ್ ವರ್ಮಾ ಅವರ ನಿವಾಸದಲ್ಲಿ ಅಪಾರ ಪ್ರಮಾಣದ ನಗದು ಪತ್ತೆ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ ಸಿಜೆಐ ಸಂಜೀವ್ ಖನ್ನಾ, ತಕ್ಷಣ ಕೊಲಿಜಿಯಂ ಸಭೆ ಕರೆದು ಬೆಳವಣಿಗೆ ಬಗ್ಗೆ ವಿವರಿಸಿದರು. ಸಭೆಯಲ್ಲಿ ಕೊಲಿಜಿಯಂ ಸದಸ್ಯರು ಸರ್ವಾನುಮತದಿಂದ ನ್ಯಾಯಮೂರ್ತಿ ವರ್ಮಾ ಅವರನ್ನು ವರ್ಗಾವಣೆ ಮಾಡಲು ನಿರ್ಧರಿಸಿದರು.

Tags:    

Writer - ವಾರ್ತಾಭಾರತಿ

contributor

Editor - Irshad Venur

contributor

Byline - ವಾರ್ತಾಭಾರತಿ

contributor

Similar News