ಇಶಾ ಫೌಂಡೇಶನ್ ವಿರುದ್ಧ ವರದಿ ಕೇಳಿದ್ದ ಮದ್ರಾಸ್ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ತಡೆ

Update: 2024-10-03 06:52 GMT

ಸದ್ಗುರು ಜಗ್ಗಿ ವಾಸುದೇವ (Photo: PTI)

ಹೊಸದಿಲ್ಲಿ: ಸದ್ಗುರು ಜಗ್ಗಿ ವಾಸುದೇವ್ ಅವರ ಇಶಾ ಫೌಂಡೇಶನ್ ವಿರುದ್ಧ ದಾಖಲಾಗಿರುವ ಎಲ್ಲಾ ಕ್ರಿಮಿನಲ್ ಪ್ರಕರಣಗಳ ಬಗ್ಗೆ ತಮಿಳುನಾಡು ಸರ್ಕಾರದಿಂದ ವರದಿ ಕೇಳಿರುವ ಮದ್ರಾಸ್ ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ ನೀಡಿದೆ.

ಮದ್ರಾಸ್ ಹೈಕೋರ್ಟ್ ಆದೇಶ ಪ್ರಶ್ನಿಸಿ ಇಶಾ ಫೌಂಡೇಶನ್ ಗುರುವಾರ ಸುಪ್ರೀಂ ಕೋರ್ಟ್ ಮೊರೆ ಹೋಗಿತ್ತು. ಇಶಾ ಫೌಂಡೇಶನ್ ಪರವಾಗಿ ವಾದ ಮಂಡಿಸಿದ ಹಿರಿಯ ವಕೀಲ ಮುಕುಲ್ ರೋಹಟಗಿ, ಈ ಕುರಿತು ತುರ್ತು ವಿಚಾರಣೆ ನಡೆಸುವಂತೆ ಸುಪ್ರೀಂಕೋರ್ಟ್ ಗೆ ಆಗ್ರಹಿಸಿದ್ದರು.

ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್, ನಾವು ಹೈಕೋರ್ಟ್ ಆದೇಶಕ್ಕೆ ತಡೆ ನೀಡುತ್ತೇವೆ, ಹೈಕೋರ್ಟ್ ಯಾವುದೇ ಪ್ರಾಥಮಿಕ ಕಾರಣವಿಲ್ಲದೆ ಆದೇಶ ನೀಡಿದೆ ಎಂದು ಹೇಳಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Irshad Venur

contributor

Byline - ವಾರ್ತಾಭಾರತಿ

contributor

Similar News